ಶಿವಮೊಗ್ಗ: ನಗರವು ಮತ್ತೆ ಉದ್ವಿಗ್ನಗೊಂಡಿದ್ದು, ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಕಿತ್ತಾಟ ನಡೆದಿದೆ.
ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಒಂದು ಗುಂಪು ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಹೊರಟಿತ್ತು. ಈ ವೇಳೆ ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಈ ವೇಳೆ ಸಾವರ್ಕರ್ ಫೋಟೊವನ್ನು ಬೀಳಿಸುವುರ ಜೊತೆಗೆ ಅಲ್ಲೇ ಪಕ್ಕದಲ್ಲಿದ್ದ ರಾಷ್ಟ್ರಧ್ವಜವನ್ನು ನೆಲಕ್ಕೆ ಬಿಳಿಸುವುದರ ಮೂಲಕ ರಾಷ್ಟ್ರಧ್ವಜಕ್ಕೂ ಅವಮಾನವನ್ನು ಮಾಡಿದ್ದಾರೆ.
Advertisement
Advertisement
ಸ್ಥಳದಲ್ಲಿ ಬೀಗುವಿನ ವಾತಾವರಣ ಉಂಟಾಗುತ್ತಿದ್ದಂತೆ, ವ್ಯಾಪಾರಿಗಳು ಸ್ವಯಂ ಆಗಿ ಅಂಗಡಿಗಳನ್ನು ಮುಚ್ಚಿದ್ದಾರೆ. ಘಟನೆ ಸಂಬಂಧಿಸಿ ಎರಡು ಕೋಮಿನವರಿಗೆ ಶಾಂತವಾಗಿರಲು ಪೊಲೀಸರು ಸೂಚನೆ ನೀಡಿದ್ದಾರೆ. ಈ ವೇಳೆ ಒಂದು ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮತ್ತೊಂದು ಕೋಮಿನ ಗುಂಪು ಪ್ರತಿಭಟನೆ ನಡೆಯುವ ಸ್ಥಳಕ್ಕೆ ನುಗ್ಗಲು ಯತ್ನಿಸಿದೆ. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ. ಎರಡು ಗುಂಪುಗಳ ಸದಸ್ಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದನ್ನೂ ಓದಿ: ಹರ್ ಘರ್ ತಿರಂಗ ಅಭಿಯಾನವು ಯಶಸ್ಸನ್ನು ಪಡೆದಿದೆ: ರಾಜ್ಯಪಾಲ
Advertisement
Advertisement
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಭೇಟಿ ನೀಡಿ, ಹಲವರನ್ನು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ವಶಕ್ಕೆ ಪಡೆದಿರುವವರನ್ನು ಬಿಡುಗಡೆ ಮಾಡುವಂತೆ ಹಿಂದುಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು. 2 ಕೋಮಿನ ನಡುವೆ ಉಂಟಾದ ಗಲಾಟೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ 2 ದಿನ ನಿಷೇಧಾಜ್ಞೆ ಜಾರಿಯಾಗಿದೆ. ಇದನ್ನೂ ಓದಿ: ಮೊದಲ ಬಾರಿಗೆ ಮೇಡ್ ಇನ್ ಇಂಡಿಯಾ ಫಿರಂಗಿಯಿಂದ ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ – ಹೊವಿಟ್ಜರ್ ವಿಶೇಷತೆ ಏನು?