ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ – ಯುವಕನಿಗೆ ಚಾಕು ಇರಿತ

Advertisements

ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಕಿತ್ತಾಟ ಉದ್ವಿಘ್ನಗೊಂಡಿದ್ದು, ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.

Advertisements

ಪ್ರೇಮ್ ಸಿಂಗ್ (26) ಚಾಕು ಇರಿದ ಘಟನೆ ಶಿವಮೊಗ್ಗದ ಗಾಂಧಿ ಬಜಾರಿನಲ್ಲಿ ನಡೆದಿದೆ. ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಮನೆ ಮುಂದೆ ನಿಂತಿದ್ದ ಪ್ರೇಮ್ ಸಿಂಗ್ ಮೇಲೆ ದಾಳಿ ನಡೆಸಿ ಚಾಕು ಇರಿದಿದ್ದಾರೆ. ಚಾಕು ಇರಿತಕ್ಕೊಳಗಾದ ಯುವಕ ಪ್ರೇಮ್ ಸಿಂಗ್‍ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯನ್ನು ನಿಯಂತ್ರಿಸಲು ಪೊಲೀಸರು ಇಂದು ಮತ್ತು ನಾಳೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಹೇರಿದ್ದಾರೆ.

Advertisements

ಘಟನೆಯೇನು?: ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಒಂದು ಗುಂಪು ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಇಡಲು ಹೊರಟಿತ್ತು. ಈ ವೇಳೆ ಎರಡು ಕೋಮಿನ ನಡುವೆ ಜಟಾಪಟಿ ನಡೆದಿದೆ. ಈ ವೇಳೆ ಸಾವರ್ಕರ್ ಫೋಟೊವನ್ನು ಬೀಳಿಸುವುರ ಜೊತೆಗೆ ಅಲ್ಲೇ ಪಕ್ಕದಲ್ಲಿದ್ದ ರಾಷ್ಟ್ರಧ್ವಜವನ್ನು ನೆಲಕ್ಕೆ ಬೀಳಿಸುವುದರ ಮೂಲಕ ರಾಷ್ಟ್ರಧ್ವಜಕ್ಕೂ ಅವಮಾನವನ್ನು ಮಾಡಿದ್ದರು. ಇದನ್ನೂ ಓದಿ: ಸಾವರ್ಕರ್ ಫೋಟೋ ವಿವಾದ – ಎರಡು ಗುಂಪುಗಳ ಮಧ್ಯೆ ಘರ್ಷಣೆ, ಶಿವಮೊಗ್ಗದಲ್ಲಿ ನಿಷೇಧಾಜ್ಞೆ

ಸ್ಥಳದಲ್ಲಿ ಕ್ಷಣ ಕ್ಷಣಕ್ಕೂ ಬೀಗುವಿನ ವಾತಾವರಣ ಉಂಟಾಗುತ್ತಿದ್ದಂತೆ, ವ್ಯಾಪಾರಿಗಳು ಸ್ವಯಂ ಆಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ. ಘಟನೆ ಸಂಬಂಧಿಸಿ ಎರಡು ಕೋಮಿನವರಿಗೆ ಶಾಂತವಾಗಿರಲು ಪೊಲೀಸರು ಸೂಚನೆ ನೀಡಿದ್ದಾರೆ. ಈ ವೇಳೆ ಒಂದು ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮತ್ತೊಂದು ಕೋಮಿನ ಗುಂಪು ಪ್ರತಿಭಟನೆ ನಡೆಯುವ ಸ್ಥಳಕ್ಕೆ ನುಗ್ಗಲು ಯತ್ನಿಸಿದೆ. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ. ಎರಡು ಗುಂಪುಗಳ ಸದಸ್ಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಸದ್ಯಕ್ಕೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ತೈಲ ಬೆಲೆ ಏರಿಕೆಯಿಂದ ಸೌದಿ ಅರಾಮ್ಕೋಗೆ ಭಾರೀ ಲಾಭ

Advertisements

Live Tv

Advertisements
Exit mobile version