ಮಂಗಳೂರು: ವಿವಿ ಕಾಲೇಜಿನಲ್ಲಿ ಸಾವರ್ಕರ್ ಫೋಟೋ ವಿಚಾರವಾಗಿ ನಡೆದ ಗಲಾಟೆಗೆ ಸಂಬಂಧ ಆರು ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜು ಆಡಳಿತ ಮಂಡಳಿ ನೀಡಿದ ದೂರಿನ ಮೇರೆಗೆ ವಿದ್ಯಾರ್ಥಿಗಳಾದ ಮರ್ಕಜ್, ಅಬೂಬುಕ್ಕರ್ ಸಿದ್ಧಿಕಿ, ಮಹಮ್ಮದ್ ಹಫೀಜ್, ಪ್ರಜನ್, ಸ್ವಸ್ತಿಕ್ ಮತ್ತು ಗುರುಕಿರಣ್ ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ಹಿಜಬ್ ಸಂಘರ್ಷ ಮಧ್ಯೆ ಸಾವರ್ಕರ್ ಫೋಟೋ ವಿವಾದ – ವಿದ್ಯಾರ್ಥಿಗಳ ಮೇಲೆ ಹಲ್ಲೆ
Advertisement
Advertisement
ನಿನ್ನೆ ಮಧ್ಯಾಹ್ನ ಸಾವರ್ಕರ್ ಫೋಟೋ ವಿಚಾರದಲ್ಲಿ ಪ್ರಾಂಶುಪಾಲರಿಗೆ ದೂರು ನೀಡಿದ್ದ ವಿದ್ಯಾರ್ಥಿಗಳ ಮೇಲೆ ಇತರೆ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಎಫ್‌ಐ, ಎನ್‌ಎಸ್‌ಯುಐ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.
Advertisement
ಇದರ ಮಧ್ಯೆ ಬಸವಕಲ್ಯಾಣದ ಪೀರ್ ಪಾಶಾ ದರ್ಗಾನೇ ಮೂಲ ಅನುಭವ ಮಂಟಪ. ಇದನ್ನು ಸರ್ಕಾರ ವಶಕ್ಕೆ ಪಡೆದು ಸಮೀಕ್ಷೆ ನಡೆಸಬೇಕು ಎಂದು ಆಗ್ರಹಿಸಿರುವ ಬಸವಭಕ್ತರು ನಾಳೆ ಹೋರಾಟಕ್ಕೆ ಮುಂದಾಗಿದ್ದಾರೆ. `ಮಠಾಧೀಶರ ನಡೆ ಮೂಲ ಅನುಭವ ಮಂಟಪದ ಕಡೆ’ ಹೆಸರಿನಲ್ಲಿ ರ‍್ಯಾಲಿ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ನೀಡಲು ಪ್ಲಾನ್ ಮಾಡಿದ್ದಾರೆ. ಇದನ್ನೂ ಓದಿ: ಇಸ್ಲಾಂ ಅನ್ನೋದು ಧರ್ಮವಲ್ಲ, ಕಾಮುಕರ ಗ್ಯಾಂಗ್: ರಾಧಾಕೃಷ್ಣ ಅಡ್ಯಂತಾಯ ವಿವಾದಾತ್ಮಕ ಹೇಳಿಕೆ