ಕೋಲ್ಕತ್ತಾ: ಇತ್ತೀಚೆಗೆ ಬಿಜೆಪಿ ಸೇರಿದ ಮಾಜಿ ಕಾಂಗ್ರೆಸ್ ನಾಯಕ ಕೌಸ್ತವ್ ಬಾಗ್ಚಿಯವರು (Kaustav Bagchi) ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ
ಕೌಸ್ತವ್ ಬಾಗ್ಚಿ ಅವರು ಶನಿವಾರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ತಮ್ಮ ರಕ್ತದಿಂದ ಬರೆದ ಪತ್ರವನ್ನು ಪ್ರಧಾನಿ ಅವರಿಗೆ ಹಸ್ತಾಂತರಿಸಿದರು. ಪತ್ರದಲ್ಲಿ, ಪ್ರಧಾನಿ ಮೋದಿಯವರೇ (Narendra Modi) ದಯವಿಟ್ಟು ಪಶ್ಚಿಮ ಬಂಗಾಳವನ್ನು ಕಳ್ಳರಿಂದ ರಕ್ಷಿಸಿ ಎಂದು ಬರೆಯಲಾಗಿದೆ. ಈ ಪತ್ರವನ್ನು ಸ್ವೀಕರಿಸಿದ ಮೋದಿಯವರು ಮತ್ತೆ ಇಂತಹ ಕೆಲಸಗಳನ್ನು ಮಾಡಬೇಡಿ ಎಂದು ಬಾಗ್ಚಿಗೆ ಬುದ್ಧಿ ಹೇಳಿದರು.
Advertisement
Advertisement
ಇತ್ತೀಚೆಗಷ್ಟೇ ಕಾಂಗ್ರೆಸ್ (Congress) ತೊರೆದು ಬಿಜೆಪಿಗೆ (BJP) ಸೇರಿದ್ದ ಬಾಗ್ಚಿ, 2023ರಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಮಾತನಾಡಿದ್ದಕ್ಕೆ ಬಾಗ್ಚಿ ಕೋಲ್ಕತ್ತಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ನಂತರ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಸರ್ಕಾರ ಉರುಳಿಸುವವರೆಗೂ ತಲೆ ಕೂದಲು ಬೆಳೆಸುವುದಿಲ್ಲ ಎಂದು ಶಪಥ ಮಾಡಿ ತಲೆ ಬೋಳಿಸಿಕೊಂಡಿದ್ದರು. ಇದನ್ನೂ ಓದಿ: ದೀದಿ ಸರ್ಕಾರ ಉರುಳಿಸೋ ವರೆಗೂ ತಲೆ ಕೂದಲು ಬೆಳೆಸಲ್ಲ: ಶಪಥ ಮಾಡಿದ್ದ ‘ಕೈ’ ನಾಯಕ ಬಿಜೆಪಿ ಸೇರ್ಪಡೆ
Advertisement
Advertisement
ಪಕ್ಷದೊಳಗಿನ ಗೌರವದ ಕೊರತೆಯನ್ನು ಉಲ್ಲೇಖಿಸಿ ಬಾಗ್ಚಿ, ಫೆಬ್ರವರಿ 28 ರಂದು ಕಾಂಗ್ರೆಸ್ ತೊರೆದಿದ್ದರು. ಕಾಂಗ್ರೆಸ್ ಉನ್ನತ ನಾಯಕತ್ವವು ಪಶ್ಚಿಮ ಬಂಗಾಳ ಘಟಕಕ್ಕೆ ಯಾವುದೇ ಪ್ರಾಮುಖ್ಯತೆಯನ್ನು ನೀಡುವುದಿಲ್ಲ. ಹಾಗಾಗಿ ನನ್ನ ಸ್ವಾಭಿಮಾನವನ್ನು ರಾಜಿ ಮಾಡಿಕೊಳ್ಳಲು ಮತ್ತು ಅದರಲ್ಲಿ ಉಳಿಯಲು ನಾನು ಬಯಸುವುದಿಲ್ಲ ಎಂದು ಅವರು ಪಕ್ಷವನ್ನು ತೊರೆದ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದರು. 2024ರ ಫೆಬ್ರವರಿ 29 ರಂದು ಬಿಜೆಪಿ ಸೇರಿದ್ದರು.
ಪ್ರಧಾನಿ ಮೋದಿ ಅವರು ಶನಿವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದು, ಈ ವೇಳೆ 4,500 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ಅನಾವರಣಗೊಳಿಸಿದರು.