ಬಳ್ಳಾರಿ: ಐತಿಹಾಸಿಕ ಹಂಪಿ ಶಿಲ್ಪಕಲೆಯನ್ನು ಉಳಿಸಿ ಮುಂದಿನ ಪೀಳಿಗೆಗೆ ತಿಳಿಸಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.
ಹಂಪಿ ಉತ್ಸವದಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ನಟ ದರ್ಶನ್, ಇನ್ನೂ ನೂರು ಶತಮಾನ ಹೋದರೂ ಹಂಪಿಯಂತಹ ಅಪೂರ್ವ ಶಿಲ್ಪಕಲೆಗಳನ್ನು ನಾವು ಕಟ್ಟುವುದಕ್ಕಾಗುವುದಿಲ್ಲ. ಆದ ಕಾರಣ ಈಗಿರುವ ಹಂಪಿಯ ಶಿಲ್ಪಕಲೆಗಳನ್ನು ಉಳಿಸಿಕೊಂಡು ಹೋಗಬೇಕು ಮತ್ತು ಮುಂದಿನ ಪೀಳಿಗೆಗೆ ಉಳಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.
Advertisement
ಇಲ್ಲಿನ ಪ್ರತಿ ಶಿಲ್ಪಕಲೆಯನ್ನು ನೋಡಿದರೇ ವಿಜಯನಗರ ಸಾಮ್ರಾಜ್ಯದವರು ಅದರಲ್ಲೂ ವಿಶೇಷವಾಗಿ ಶ್ರೀಕೃಷ್ಣದೇವರಾಯ ಅವರು ಮಾಡಿರುವ ಸಾಧನೆಗಳು ಮತ್ತು ಪರಾಕ್ರಮಗಳು ತಿಳಿಯುತ್ತವೆ. ಅದನ್ನು ಉಳಿಸಿಕೊಂಡು ಹೋಗುವುದರ ಜೊತೆಗೆ ಕನ್ನಡ ಸಿನಿಮಾಗಳನ್ನು ಹೆಚ್ಚೆಚ್ಚು ನೋಡಿ ಎಂದು ಮನವಿ ಮಾಡಿದರು. ಉತ್ಸವದಲ್ಲಿ ದರ್ಶನ್‍ರನ್ನು ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದರು.
Advertisement
Advertisement
ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಹಾಗೂ ಶಾಸಕ ಮುನಿರತ್ನ ಅವರು ಮಾತನಾಡಿ, ಶ್ರೀಕೃಷ್ಣದೇವರಾಯ ಸಿನಿಮಾನವನ್ನು ನಿರ್ಮಾಣ ಮಾಡಿಯೇ ಸಿದ್ದ. ವಜ್ರ-ವೈಡೂರ್ಯಗಳನ್ನು ಬಳ್ಳದಲ್ಲಿ ಅಳೆಯುತ್ತಿದ್ದ ಧರ್ಮದ ನಾಡು ಇದು. ಇಲ್ಲಿ ಅನೇಕ ಕುರುಹಗಳಿದ್ದು, ಎಲ್ಲ ಭಾಷೆಗಳಿಗೂ ಆಗುವಂತ ಶ್ರೀಕೃಷ್ಣದೇವರಾಯ ಚಿತ್ರ ನಿರ್ಮಾಣ ಮಾಡಲಾಗುವುದು ಮತ್ತು ಅದರಲ್ಲಿ ದರ್ಶನ್ ಅವರ ಪಾತ್ರ ಇದ್ದೇ ಇರುತ್ತದೆ ಎಂದರು.
Advertisement
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್, ಸಚಿವರಾದ ತುಕಾರಾಂ, ಪಿ.ಟಿ.ಪರಮೇಶ್ವರ ನಾಯಕ್, ಸಂಸದ ಉಗ್ರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಸದೀಯ ಕಾರ್ಯದರ್ಶಿ ಗೋಪಾಲಸ್ವಾಮಿ, ಶಾಸಕರಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಸೋಮಶೇಖರ್ ರೆಡ್ಡಿ, ಜಿಪಂ ಉಪಾಧ್ಯಕ್ಷೆ ದೀನಾ ಮಂಜುನಾಥ, ಹಂಪಿ ಗ್ರಾಪಂ ಅಧ್ಯಕ್ಷೆ, ಕಮಲಾಪುರ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಮಳಲಿ, ಜಿಪಂ ಸಿಇಒ ನಿತೀಶ್, ಎಸ್ಪಿ ಅರುಣ ರಂಗರಾಜನ್,ಹಂಪಿ ವಿಶ್ವ ಪರಂಪರೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ದಿವ್ಯಪ್ರಭು ಮತ್ತಿತರರು ಇದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv