– ಗೂಂಡಾಗಳ ಕೈಗೆ ರಾಜ್ಯ ನೀಡಿದ ಕಾಂಗ್ರೆಸ್ ಸರ್ಕಾರ ಎಂದು ವಾಗ್ದಾಳಿ
ಮಂಗಳೂರು: ಕರ್ನಾಟಕದಲ್ಲಿ (Karnataka) ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್ ಎಂದು ಘೋಷಣೆ ಕೂಗೋದೇ ತಪ್ಪಾಗಿದೆ. ಕಾಂಗ್ರೆಸ್ (Congress) ಸರ್ಕಾರ ಗೂಂಡಾಗಳ ಕೈಗೆ ರಾಜ್ಯವನ್ನು ಕೊಟ್ಟಿದ್ದು, ಇಂತಹ ಘೋಷಣೆ ಕೂಗಿದರೆ ಚೂರಿ ಹಾಕುತ್ತಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಆಕ್ರೋಶ ವ್ಯಕ್ತಪಡಿಸಿದರು.
Advertisement
ಉಳ್ಳಾಲದ ಬೋಳಿಯಾರಿನಲ್ಲಿ (Boliyar Case) `ಭಾರತ್ ಮಾತಾಕಿ ಜೈ’ ಎಂದು ಕೂಗಿದ ನಂತರ ಚಾಕು ಇರಿತಕ್ಕೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ (BJP) ಕಾರ್ಯಕರ್ತನನ್ನು ಆರ್.ಅಶೋಕ್ ಭೇಟಿ ಮಾಡಿ ಧೈರ್ಯ ಹೇಳಿದರು. ಇದನ್ನೂ ಓದಿ: ಒಡಿಶಾದ ಮೊದಲ ಬಿಜೆಪಿ ಸಿಎಂ ಆಗಿ ಮೋಹನ್ ಚರಣ್ ಪ್ರಮಾಣವಚನ ಸ್ವೀಕಾರ
Advertisement
Advertisement
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳು ನಡೆಯದಂತೆ ಬಿಜೆಪಿ ಎಚ್ಚರ ವಹಿಸಲಿದೆ. ಕಾರ್ಯಕರ್ತರ ಜೊತೆಗೆ ನಾವೆಲ್ಲರೂ ಸದಾ ನಿಲ್ಲುತ್ತೇವೆ. ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ಮಾಡಬೇಕು. ಹಾಗೆಯೇ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ಪೋಕ್ಸೋ ಕೇಸ್ – ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ CID ನೋಟಿಸ್!
Advertisement
ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಕೂಗಿದ್ದಕ್ಕೇ ಬಿಜೆಪಿ ಕಾರ್ಯಕರ್ತರಾದ ಹರೀಶ್ ಮತ್ತು ನಂದಕುಮಾರ್ ಅವರಿಗೆ ಚೂರಿ ಇರಿಯಲಾಗಿದೆ. ಈ ತಾಲಿಬಾನ್ ಸರ್ಕಾರದಿಂದ ಪಾಕಿಸ್ತಾನಕ್ಕೆ ಜೈಕಾರದ ಘೋಷಣೆ ಕೇಳಿಬರುತ್ತಿದೆ. ಈ ಘಟನೆಯನ್ನು ಸದನದಲ್ಲೂ ಪ್ರಶ್ನಿಸಿ ಹೋರಾಟ ಮಾಡುತ್ತೇವೆ. ಸ್ಪೀಕರ್ ಮತ್ತು ಆರೋಗ್ಯ ಸಚಿವರು ಆಸ್ಪತ್ರೆ ಕಾರ್ಯಕ್ರಮಕ್ಕೆ ಬಂದಿದ್ದರೂ ಗಾಯಾಳುಗಳನ್ನು ನೋಡಿ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ದೂರಿದರು. ಇದನ್ನೂ ಓದಿ: ಪೆಮಾ ಖಂಡು ಸತತ 3ನೇ ಅವಧಿಗೆ ಅರುಣಾಚಲ ಪ್ರದೇಶ ಸಿಎಂ
ಈ ಘಟನೆ ನಡೆದ ನಂತರ ಪಾಕಿಸ್ತಾನದ (Pakistan) ಕುರಿತು ಹೇಳಿದ್ದಾರೆಂದು ಆರೋಪಿಸಿ ಅಮಾಯಕ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಒಂದು ವೇಳೆ ಹಾಗಿದ್ದಲ್ಲಿ ಅದರ ಕುರಿತಾದ ವೀಡಿಯೋ ಅಥವಾ ಪುರಾವೆ ಬಿಡುಗಡೆ ಮಾಡಲಿ. ಭಾರತ್ ಮಾತಾ ಕೀ ಜೈ ಎನ್ನುವುದು ಬಿಟ್ಟರೆ ಬೇರಾವುದೇ ಘೋಷಣೆ ಕೂಗಿಲ್ಲ. ಇನ್ನೊಂದು ಪ್ರಕರಣ ದಾಖಲಿಸಿ ಮುಖ್ಯವಾದ ಪ್ರಕರಣವನ್ನು ಮುಚ್ಚಿಹಾಕುವ ಕೆಲಸವನ್ನು ಜಿಲ್ಲಾಡಳಿತ ಮಾಡುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ದಾಖಲಿಸಿದ ಪ್ರಕರಣವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸ್: 3ನೇ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ!
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ:
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 20% ಹಣ ನುಂಗಿದ ಸಚಿವರ ರಾಜೀನಾಮೆ ಪಡೆಯಲಾಗಿದೆ. ಆದರೆ 80% ಹಣ ನುಂಗಿದ ಸಿಎಂ ಸಿದ್ದರಾಮಯ್ಯ (Siddaramaiah) ಕೂಡ ರಾಜೀನಾಮೆ ನೀಡಬೇಕು. ಇದಕ್ಕಾಗಿ ಸದನದಲ್ಲಿ ಆಗ್ರಹ ಮಾಡುತ್ತೇವೆ. ತೆಲಂಗಾಣದಲ್ಲೂ ಕಾಂಗ್ರೆಸ್ ಸರ್ಕಾರವಿದ್ದು, ಅಲ್ಲಿಗೂ ನಿಗಮದ ಹಣ ಸಂದಾಯವಾಗಿದೆ. ಆದ್ದರಿಂದ ಇದು ದೊಡ್ಡ ಭ್ರಷ್ಟಾಚಾರದ ಪ್ರಕರಣ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ; ಮತ್ತೋರ್ವ ಆರೋಪಿ ಬಂಧನ