ಬೆಂಗಳೂರು: ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್‌ಬಿಐ ಮಹಿಳಾ ಮ್ಯಾನೇಜರ್‌ನನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
View this post on Instagram
ಕನ್ನಡಿಗರ ಹೋರಾಟಕ್ಕೆ ಹೆದರಿ ಮಂಗಳವಾರ ರಾತ್ರಿಯೇ ಮ್ಯಾನೇಜರ್‌ನನ್ನು ಟ್ರಾನ್ಸ್‌ಫರ್ ಮಾಡಲಾಗಿದೆ. ಮಹಿಳಾ ಮ್ಯಾನೇಜರ್‌ನನ್ನು ಹೊರ ರಾಜ್ಯಕ್ಕೆ ವರ್ಗಾವಣೆಗೊಳಿಸುವಂತೆ ಆದೇಶ ನೀಡಲಾಗಿದೆ ಎಂದು ಎಸ್‌ಬಿಐ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕನ್ನಡ ಮಾತಾಡಿ ಅಂದಿದ್ದಕ್ಕೆ SBI ಬ್ಯಾಂಕ್ ಮ್ಯಾನೇಜರ್ ಕಿರಿಕ್ – ಯಾವತ್ತೂ ಕನ್ನಡ ಮಾತಾಡಲ್ಲ ಅಂತ ದರ್ಪ!
ಗ್ರಾಹಕರೊಬ್ಬರು ಕೆಲಸದ ನಿಮಿತ್ತ ಬೆಂಗಳೂರು ಹೊರವಲಯದ ಚಂದಾಪುರ ಎಸ್‌ಬಿಐ ಬ್ಯಾಂಕ್‌ಗೆ(SBI Bank) ಹೋದಾಗ ಕನ್ನಡ ಮಾತನಾಡುವಂತೆ ಮಹಿಳಾ ಬ್ಯಾಂಕ್ ಮ್ಯಾನೇಜರ್(Bank Manager) ಬಳಿ ಕೇಳಿದ್ದಾರೆ. ಆದರೆ ಕನ್ನಡ ಮಾತನಾಡಲು ಒಪ್ಪದ ಮಹಿಳಾ ಮ್ಯಾನೇಜರ್ ಗ್ರಾಹಕನಿಗೆ ಹಿಂದಿಯಲ್ಲಿ ಮಾತನಾಡುವಂತೆ ಅವಾಜ್ ಹಾಕಿದ್ದು, ಇದು ಭಾರತ.. ಬರೀ ಕರ್ನಾಟಕ ಮಾತ್ರ ಅಲ್ಲ. ನಾನು ಯಾವತ್ತೂ ಕನ್ನಡವನ್ನೇ ಮಾತಾಡಲ್ಲ. ಏನೇ ಆದರೂ ಅಂತ ಹೇಳುವ ಮೂಲಕ ಕನ್ನಡಿಗರನ್ನು(Kannadigas) ಕೆರಳಿಸಿದ್ದರು. ಇದನ್ನೂ ಓದಿ: ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ರಾಶಿ ಖನ್ನಾಗೆ ಗಾಯ- ಪೋಸ್ಟ್ ಹಂಚಿಕೊಂಡ ನಟಿ
ಬ್ಯಾಂಕ್ ಮ್ಯಾನೇಜರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಎಸ್‌ಬಿಐ ಮಹಿಳಾ ಮ್ಯಾನೇಜರ್‌ನನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿದೆ.