ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿ ನಾಶಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಸಾರ್ವಜನಿಕ ಆಸ್ತಿ ನಾಶದ ನಷ್ಟ ವಸೂಲಾತಿಗಾಗಿ ಪ್ರತಿಭಟನಾಕಾರರಿಗೆ ನೀಡಿರುವ ನೋಟಿಸ್‌ನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕು. ಇಲ್ಲವೇ ನಾವೇ ರದ್ದುಗೊಳಿಸುತ್ತೇವೆ ಎಂದು ಯೋಗಿ ನೇತೃತ್ವದ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಹಿಜಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ: ಅಮೆರಿಕ
ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಸೂರ್ಯ ಕಾಂತ ಅವರಿದ್ದ ನ್ಯಾಯಪೀಠ, ವಸೂಲಾತಿಗೆ ಸಂಬಂಧಿಸಿದಂತೆ ನೀಡಿರುವ ನೋಟಿಸ್ ಅನ್ನು ಸರ್ಕಾರ ಹಿಂತೆಗೆದುಕೊಳ್ಳಲು ಕೊನೆಯ ಅವಕಾಶ ನೀಡಲಾಗಿದೆ. ಇಲ್ಲವಾದಲ್ಲಿ ಕಾನೂನು ಉಲ್ಲಂಘನೆ ಎಂದು ನಾವೇ ರದ್ದುಗೊಳಿಸುತ್ತೇವೆ ಎಂದು ತಿಳಿಸಿದೆ.
ಉತ್ತರ ಪ್ರದೇಶ ಸರ್ಕಾರವು ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ನಡೆಸುವಲ್ಲಿ ಸ್ವತಃ ದೂರುದಾರ, ತೀರ್ಪುಗಾರ ಮತ್ತು ಪ್ರಾಸಿಕ್ಯೂಟರ್‌ನಂತೆ ವರ್ತಿಸಿದೆ ಎಂದು ಪೀಠವು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಜೈಪುರಕ್ಕೆ ಕಾಲಿಟ್ಟ ಹಿಜಬ್ ವಿವಾದ – ಬುರ್ಕಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ನೋ ಎಂಟ್ರಿ ಎಂದ ಕಾಲೇಜ್
ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಆಸ್ತಿಗಳಿಗೆ ಉಂಟಾದ ಹಾನಿಯನ್ನು ವಸೂಲಿ ಮಾಡಲು ಉತ್ತರ ಪ್ರದೇಶ ಸರ್ಕಾರವು ಹೊರಡಿಸಿದ ವಸೂಲಾತಿ ನೋಟಿಸ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಉತ್ತರ ಪ್ರದೇಶದಲ್ಲಿ ಸಿಎಎ-ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸಂಭವಿಸಿದ ಘಟನೆಗಳ ಬಗ್ಗೆ ತನಿಖೆ ನಡೆಸಲು ಸ್ವತಂತ್ರ ನ್ಯಾಯಾಂಗ ತನಿಖೆಯನ್ನು ಸ್ಥಾಪಿಸಲು ನಿರ್ದೇಶನ ನೀಡುವಂತೆ ಕೋರಿ ವಕೀಲ ಪರ್ವೇಜ್ ಆರಿಫ್ ಟಿಟು ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಪಬ್ಲಿಕ್ ಟಿವಿಯ ತೇರು ʼದಶʼರಥ
ಯುಪಿ ಸರ್ಕಾರದ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಅವರು, ರಾಜ್ಯದಲ್ಲಿ 833 ಗಲಭೆಕೋರರ ವಿರುದ್ಧ 106 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. 274 ವಸೂಲಾತಿ ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.