ನವದೆಹಲಿ: ವಿವಿಧ ಸೇವೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಅಂತಿಮ ದಿನಾಂಕವನ್ನು ಸುಪ್ರೀಂಕೋರ್ಟ್ ಅನಿರ್ಧಿಷ್ಟ ಅವಧಿವರೆಗೆ ವಿಸ್ತರಣೆ ಮಾಡಿದೆ.
ಈ ಹಿಂದೆ ಮಾರ್ಚ್ 31 ಆಧಾರ್ ಕಾರ್ಡ್ ಲಿಂಕ್ ಮಾಡಲು ಕೊನೆ ದಿನಾಂಕವಾಗಿತ್ತು. ಆದರೆ ಈಗ ಆಧಾರ್ ಸಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಇತ್ಯರ್ಥ ಆಗುವವರೆಗೂ ಈ ಗಡುವು ವಿಸ್ತರಣೆಯಾಗಲಿದೆ ಎಂದು ಮುಖ್ಯ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರನ್ನು ಒಳಗೊಂಡ ಪೀಠ ಹೇಳಿದೆ.
Advertisement
ವಿಚಾರಣೆ ವೇಳೆ ನ್ಯಾಯಾಲಯ ಮಾರ್ಚ್ 31ರ ವೇಳೆಗೆ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ಈ ಅವಧಿಯೊಳಗೆ ಬ್ಯಾಂಕ್ ಸೇರಿದಂತೆ ಇತರೇ ಆರ್ಥಿಕ ಸೇವೆಗಳಿಗೆ ಆಧಾರ್ ಲಿಂಕ್ ಮಾಡಲು ಸಾಧ್ಯವಾಗದೇ ಇದ್ದರೆ ಗಂಭೀರ ಸ್ವರೂಪ ಸಮಸ್ಯೆಗಳು ಎದುರಿಸಬೇಕಾಗುತ್ತದೆ ಎಂದು ತಿಳಿಸಿತ್ತು.
Advertisement
Advertisement
ಕಳೆದ ವರ್ಷ ಡಿಸೆಂಬರ್ 15 ಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಡೆಡ್ಲೈನ್ ನಿಗದಿಯಾಗಿತ್ತು. ಇದಾದ ಬಳಿಕ ಸುಪ್ರೀಂ ಕೋರ್ಟ್ ಮಾರ್ಚ್ 31ಕ್ಕೆ ಡೆಡ್ಲೈನ್ ವಿಸ್ತರಿಸಿತ್ತು. ಮಾರ್ಚ್ 31ರ ನಂತರ ಯಾವುದೇ ಕಾರಣಕ್ಕೂ ಡೆಡ್ ಲೈನ್ ವಿಸ್ತರಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಈ ಹಿಂದೆ ತಿಳಿಸಿತ್ತು.
Advertisement
ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ. ಎಸ್. ಪುಟ್ಟಸ್ವಾಮಿ ಅವರು ಕೇಂದ್ರ ಸರ್ಕಾರ ತನ್ನ ಸೇವೆಗಳಿಗೆ `ಆಧಾರ್’ ಕಡ್ಡಾಯ ಮಾಡಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕಾನೂನು ಮಾನ್ಯತೆ ಇಲ್ಲದ `ಆಧಾರ್’ ಸಂಖ್ಯೆಯಿಂದ ನಾಗರಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.