ನವದೆಹಲಿ: ಮುಸ್ಲಿಂ ಹುಡುಗಿಯರ (Muslims Women) ಮದುವೆ ವಯಸ್ಸನ್ನು ಹೆಚ್ಚಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ (National Women Commission) ಸುಪ್ರೀಂ ಕೋರ್ಟ್‌ಗೆ (Supreme Court) ಮನವಿ ಮಾಡಿದೆ.
ಎಲ್ಲ ಸಮುದಾಯಗಳ ಯುವತಿಯರ ವಿವಾಹ (Marriage) ವಯಸ್ಸನ್ನು ಧರ್ಮಾತೀತವಾಗಿ 18 ವರ್ಷಕ್ಕೆ ನಿಗದಿಪಡಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್ (Supreme Court), ಈ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ (Government Of India) ನೋಟೀಸ್ ಜಾರಿ ಮಾಡಿದೆ. ಇದನ್ನೂ ಓದಿ: ಕಲಬುರಗಿಯಲ್ಲಿ ಜಂಪಿಂಗ್ ಪಾಲಿಟಿಕ್ಸ್ ಶುರು- ತೆನೆ ಇಳಿಸಿ ಕೈ ಹಿಡಿದ ರೇವು ನಾಯಕ್ ಬೆಳಮಗಿ
Advertisement
Advertisement
ಮುಸ್ಲಿಂ ಹುಡುಗಿಯರ ಮದುವೆಯ ವಯಸ್ಸನ್ನು ಹೆಚ್ಚಿಸಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗದ ವಕೀಲ ನಿತಿನ್ ಸಲುಜಾ ಅವರ ಮೂಲಕ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಇದನ್ನೂ ಓದಿ: ಶ್ರದ್ಧಾ ವಾಕರ್ ಹತ್ಯೆ ಕೇಸ್- ಪೀಸ್ ಪೀಸ್ ಪ್ರೇಮಿಗೆ ಜೈಲು ಅವಧಿ ವಿಸ್ತರಣೆ
Advertisement
Advertisement
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO act) ಕಾಯ್ದೆ, ಐಪಿಸಿ (IPC) ಮತ್ತು ಮಕ್ಕಳ ವಿವಾಹ ನಿಷೇಧ (PCM) ಕಾಯ್ದೆಯನ್ನು ಧರ್ಮ ಅಥವಾ ವೈಯಕ್ತಿಕ ಕಾನೂನುಗಳನ್ನು ಲೆಕ್ಕಿಸದೇ ಎಲ್ಲರಿಗೂ ಸಮಾನವಾಗಿ ಅನ್ವಯಿಸಲು ನಿರ್ದೇಶನ ನೀಡಬೇಕು. ಸಂವಿಧಾನದ 14, 15 ಮತ್ತು 21ನೇ ವಿಧಿಗಳ ಅಡಿಯಲ್ಲಿ ಖಾತ್ರಿಪಡಿಸಿದ ಮೂಲಭೂತ ಹಕ್ಕುಗಳನ್ನು ಮುಸ್ಲಿಂ ಮಹಿಳೆಯರು ಮತ್ತು ಬಾಲಕಿಯರಿಗೂ ಅನ್ವಯಿಸಿ, ಎತ್ತಿಹಿಡಿಯಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.
ಮುಸ್ಲಿಂ ವೈಯಕ್ತಿಕ ಕಾನೂನುಗಳ ಅನುಸಾರ 16 ವರ್ಷದ ಬಾಲಕಿಯ ಮದುವೆಯನ್ನು ಮಾನ್ಯಗೊಳಿಸಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನ ಸಿಂಧುತ್ವವನ್ನು ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗವು ಈ ಹಿಂದೆ ಪ್ರತ್ಯೇಕವಾಗಿ ಪ್ರಶ್ನಿಸಿತ್ತು. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು.