ನವದೆಹಲಿ: 2019 ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲೇ ಸುಪ್ರೀಂ ಕೋರ್ಟ್ ವಿವಿಪ್ಯಾಟ್ ಹಾಗೂ ಇವಿಎಂ ಶೇ.50 ರಷ್ಟು ತಾಳೆ ನೋಡಲು ವಿಪಕ್ಷಗಳು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನ ವಜಾಗೊಳಿಸಿದೆ.
ಅರ್ಜಿಯ ಕುರಿತು ಈಗಾಗಲೇ ನ್ಯಾಯಾಲಯ ನೀಡಿರುವ ಆದೇಶವನ್ನು ಮತ್ತೆ ಪುನರ್ ಪರಿಶೀಸಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ನೇತೃತ್ವದ ಪೀಠ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿದೆ.
Advertisement
Advertisement
ಕೆಲ ದಿನಗಳ ಹಿಂದೆ ಈ ಕುರಿತು ಮಹತ್ವದ ಆದೇಶ ನೀಡಿದ್ದ ನ್ಯಾಯಾಲಯ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯ ಬದಲಾಗಿ 5 ಮತಗಟ್ಟೆಯ ವಿವಿ ಪ್ಯಾಟ್ ಹಾಗೂ ಇವಿಎಂ ಯಂತ್ರಗಳಲ್ಲಿ ಚಲಾವಣೆಯಾದ ಮತಗಳನ್ನು ತಾಳೆ ಮಾಡಬೇಕು ಎಂದು ಆದೇಶಿಸಿತ್ತು. ಈ ತೀರ್ಪನ್ನು ಪುನರ್ ಪರಿಶೀಲಿಸಿ ಶೇ. 25 ರಷ್ಟು ಇವಿಎಂ ಗಳನ್ನಾದರು ತಾಳೆ ನೋಡಬೇಕು ಎಂದು 21 ರಾಜಕೀಯ ಪಕ್ಷಗಳು ಅರ್ಜಿ ಸಲ್ಲಿಕೆ ಮಾಡಿದ್ದವು. ಇದಕ್ಕೂ ಮುನ್ನ ಸಲ್ಲಿಸಿದ್ದ ಅರ್ಜಿಯಲ್ಲಿ ಪ್ರತಿ ಚುನಾವಣಾ ಕ್ಷೇತ್ರದ ಶೇ.50 ರಷ್ಟು ಇವಿಎಂ ಗಳನ್ನು ವಿವಿಪ್ಯಾಟ್ ನೊಂದಿಗೆ ಹೋಲಿಕೆ ಮಾಡಿ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿತ್ತು. ಈ ಮನವಿಗೆ ಆಯೋಗ ಶೇ.50 ರಷ್ಟು ಮತ ಎಣಿಕೆ ನಡೆಸಿದರೆ ಫಲಿತಾಂಶ ಪ್ರಕಟಿಸಲು 5-6 ದಿನ ಬೇಕಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿತ್ತು.