– ಇಡಿಗೆ ನೋಟಿಸ್, ಆದೇಶ ಪ್ರಕಟಿಸಲು ಹೈಕೋರ್ಟ್‌ಗೆ ನಿರ್ದೇಶನ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ (Hemant Soren) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
ನ್ಯಾ. ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಮುಂದಿನ ವಾರ ವಿಚಾರಣೆಗೆ ಪ್ರಕರಣವನ್ನು ಪಟ್ಟಿ ಮಾಡಿದೆ. ವಿಚಾರಣೆ ವೇಳೆ ಸೂರೇನ್ ತಮ್ಮ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಕಾಯ್ದಿರಿಸಿದ ತೀರ್ಪು ಪ್ರಕಟಿಸಲು ಜಾರ್ಖಂಡ್ (Jharkhand) ಹೈಕೋರ್ಟ್‌ಗೆ ಮುಕ್ತ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ (Supreme Court) ತಿಳಿಸಿದೆ. ಇದನ್ನೂ ಓದಿ: ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ- ಮೋದಿಗೆ ಪ್ರಿಯಾಂಕಾ ಪ್ರಶ್ನೆ
ಸೂರೇನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಜಾರ್ಖಂಡ್ ಹೈಕೋರ್ಟ್ ಸೂರೇನ್ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯಲ್ಲಿ ಆದೇಶವನ್ನು ನೀಡಲು ವಿಳಂಬ ಮಾಡುತ್ತಿರುವುದು ಎತ್ತಿ ತೋರಿಸಿದ್ದಾರೆ ಎಂದು ಆರೋಪಿಸಿದರು. ವಾದ ಆಲಿಸಿದ ಬಳಿಕ ಸುಪ್ರೀಂ ನೋಟಿಸ್ ಜಾರಿ ಮಾಡಿತು.
ಈ ಹಿಂದೆ ಹೇಮಂತ್ ಸೂರೇನ್ ತಮ್ಮ ಬಂಧನವನ್ನು ಪ್ರಶ್ನಿಸಿ ಆರ್ಟಿಕಲ್ 32ರ ಅಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಆದರೆ ಸುಪ್ರೀಂ ಕೋರ್ಟ್ ಅದನ್ನು ಸ್ವೀಕರಿಸಲು ನಿರಾಕರಿಸಿತು ಮತ್ತು ಮೊದಲು ಜಾರ್ಖಂಡ್ ಹೈಕೋರ್ಟ್‌ಗೆ ಸಂಪರ್ಕಿಸಲು ಸೂಚಿಸಿತ್ತು. ಇದನ್ನೂ ಓದಿ: ಪ್ರಜ್ವಲ್ ಜರ್ಮನಿಯಲ್ಲಿರಲಿ, ಎಲ್ಲೇ ಇರಲಿ ಕ್ರಮಕ್ಕೆ ಸಿಎಂ ಆದೇಶಿಸಲಿ: ಅಲ್ಕಾ ಲಂಬಾ
ರಾಜ್ಯದಲ್ಲಿ ಮಾಫಿಯಾದಿಂದ ಭೂಮಿಯ ಮಾಲೀಕತ್ವದ ಅಕ್ರಮ ಬದಲಾವಣೆಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಜನವರಿ 31 ರಂದು ಸೋರೆನ್ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೋರೆನ್, ರಂಜನ್, ಇತರ ಒಂಬತ್ತು ಮತ್ತು ಮೂರು ಕಂಪನಿಗಳ ವಿರುದ್ಧ ಪಿಎಂಎಲ್‌ಎ ಸೆಕ್ಷನ್ 45ರ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ದೂರು ದಾಖಲಿಸಿದೆ.
ಅಕ್ರಮ ಹಣ ವರ್ಗಾವಣೆ ಆರೋಪವನ್ನು ಸೊರೆನ್ ನಿರಾಕರಿಸಿದ್ದಾರೆ. ತಮ್ಮನ್ನು ಬಂಧಿಸುವ ಮೊದಲು ಬಿಡುಗಡೆ ಮಾಡಿದ ವೀಡಿಯೊದಲ್ಲಿ ಪಿತೂರಿಯ ಭಾಗವಾಗಿ “ನಕಲಿ ಪೇಪರ್” ಆಧಾರದ ಮೇಲೆ ತನ್ನನ್ನು ಬಂಧಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.