ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ (SC, ST Reservation) ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ (Congress) ಶುಕ್ರವಾರ ರಾಜಭವನ ಚಲೋ ಹಮ್ಮಿಕೊಂಡಿತ್ತು.
ಕೆಪಿಸಿಸಿ ಕಚೇರಿಯಿಂದ (KPCC Office) ರಾಜಭವನಕ್ಕೆ ಕಾಂಗ್ರೆಸ್ ನಾಯಕರು ತೆರಳಲು ಮುಂದಾದಾಗ ಅರ್ಧದಲ್ಲೇ ಪೊಲೀಸರು ಕೈ ನಾಯಕರನ್ನು ತಡೆದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಇದನ್ನೂ ಓದಿ: ಚಿತ್ರರಂಗದವರನ್ನು ‘ಕೈ’ ಹಿಡಿಯದ ಮೈಸೂರು ಮತದಾರ!
Advertisement
Advertisement
ವಶಕ್ಕೆ ಪಡೆಯುವುದಕ್ಕೆ ಮುನ್ನ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ (BJP) ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೋಸ ಮಾಡಿದೆ. ಇಲ್ಲಿಯವರೆಗೆ ಸುಮ್ಮನಿದ್ದ ಅವರು ನಾವು ಪ್ರತಿಭಟನೆಗೆ ಮುಂದಾದ ಬಳಿ ಇವತ್ತು ಕಳುಹಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.
Advertisement
ನಾವು ಬೃಹತ್ ಮಟ್ಟದಲ್ಲಿ ಪ್ರತಿಭಟನೆ ಕೈಗೆತ್ತಿಕೊಂಡ ನಂತರ ಪರಿಶಿಷ್ಠರ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ತರಾತುರಿಯಲ್ಲಿ ಕಣ್ಣೊರೆಸುವ ತಂತ್ರಕ್ಕೆ ಮೊರೆ ಹೋಗಿದೆ. ಇದು ಬಿಜೆಪಿ ಕರ್ನಾಟಕದ ಕಿವಿ ಮೇಲೆ ಹೂ ಇಡುವ ಕೆಲಸ ಎಂಬುದು ಸ್ಪಷ್ಟ. ಇಲ್ಲಿಯವರೆಗೆ ಸುಮ್ಮನಿದ್ದು, ಈಗ ಪ್ರಸ್ತಾವನೆ ಸಲ್ಲಿಸುವುದು ಮೂಗಿಗೆ ತುಪ್ಪ ಸವರಲು ಮಾತ್ರ ಎಂದು ಕಾಂಗ್ರೆಸ್ ಕಿಡಿಕಾರಿದೆ.