ಬೆಂಗಳೂರು: ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ನಾವಾಗಿಯೇ ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಹೇಳಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಮಾತನಾಡುತ್ತಾ ಬ್ಯಾಂಕ್‌ನವರು ಸಿಬಿಐಗೆ ದೂರು ನೀಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೂರು ಕೋಟಿ ರೂ. ಮೇಲು ಹಗರಣಗಳಾದಾಗ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತದೆ. ಈಗ ಸಿಐಡಿಯವರು ತನಿಖೆ ಆರಂಭಿಸಿದ್ದಾರೆ. ನೂರು ಕೋಟಿ ರೂ. ಅಧಿಕ ಅಕ್ರಮ ನಡೆದಿದೆಯೋ, ಏನಾಗಿದೆ ಎಂಬುದು ಸಿಐಡಿ ತನಿಖೆಯಿಂದ ಗೊತ್ತಾಗಲಿದೆ ಎಂದಿದ್ದಾರೆ.
ನೂರು ಕೋಟಿ ರೂ. ಮೇಲೂ ಅಕ್ರಮವಾಗಿದ್ದರೆ ಮುಂದೆ ಏನು ಆಗುತ್ತದೆ ಎಂಬುದನ್ನು ನೋಡೋಣ. ನಾವಾಗಿಯೇ ಸಿಬಿಐಗೆ ವರ್ಗಾವಣೆ ಮಾಡುವುದಿಲ್ಲ. ಅಂತಹ ಸಂದರ್ಭ ಬಂದಾಗ ಸಿಎಂ ಜೊತೆ ಚರ್ಚೆ ಮಾಡಲೇಬೇಕಾಗುತ್ತದೆ. ಪ್ರತಿಭಟನೆ ಮಾಡುವುದು ಗಡುವು ನೀಡುವುದು ವಿಪಕ್ಷದವರ ಹಕ್ಕು, ಮಾಡಲಿ. ಸರ್ಕಾರದಲ್ಲಿ ನಮಗೆ ಆದಂತಹ ಜವಾಬ್ದಾರಿಗಳಿವೆ. ನಾ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಯಾಗ ಮಾಡುವುದರಿಂದ ಸರ್ಕಾರ ಬೀಳುವುದು, ಸರ್ಕಾರ ಬರುವುದಾಗಿದ್ದರೆ, ಈ ದೇಶದಲ್ಲಿ ಬಹಳ ಜನ ಯಾಗ ಮಾಡಿಕೊಂಡು ಕುಳಿತಿರಬೇಕಾಗುತ್ತಿತ್ತು ಎಂದಿದ್ದಾರೆ. ಇದನ್ನೂ ಓದಿ: ನನಗೆ ಕೊಟ್ಟಿರುವ ರೂಂ ಸರಿಯಿಲ್ಲ, ಕೆಟ್ಟ ವಾಸನೆ ಬರುತ್ತಿದೆ: ಜಡ್ಜ್ ಮುಂದೆ ಪ್ರಜ್ವಲ್ ಅಳಲು