ಬೆಂಗಳೂರು: ವಾಲ್ಮೀಕಿ ನಿಗಮ, ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯ ಬಳಿಕ ವಕ್ಫ್ ಬೋರ್ಡ್‌ನಲ್ಲೂ (Waqf Board) ಕೋಟ್ಯಂತರ ರೂ. ಹಣವನ್ನು ಅಕ್ರಮ ವರ್ಗಾವಣೆ ಮಾಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ.
ಹೌದು. ವಕ್ಫ್ ಬೋರ್ಡ್ ಮಾಜಿ ಸಿಇಒ ಝುಲ್ಫಿಕಾರುಲ್ಲಾ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ (High Grounds Police) ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹಮದ್ ಅಬ್ಬಾಸ್ ಕೊಟ್ಟ ದೂರಿನ ಆಧಾರ ಮೇಲೆ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಂತೆ ಪ್ರವಾಸೋದ್ಯಮ ಇಲಾಖೆಯಲ್ಲೂ ಗೋಲ್ಮಾಲ್ – 2.47 ಕೋಟಿ ರೂ. ಅಕ್ರಮ ಹಣ ವರ್ಗಾವಣೆ
ದೂರಿನಲ್ಲಿ ಏನಿದೆ?
ವಕ್ಫ್ ಮಂಡಳಿ ಆಸ್ತಿ ಮಾರಾಟ ಸಂಬಂಧ 4 ಕೋಟಿ ರೂ. ಹಣ ಮಂಡಳಿ ಬ್ಯಾಂಕ್ ಖಾತೆಗೆ ಜಮೆಯಾಗಿತ್ತು. ಈ ಹಣವನ್ನು 2016ರಲ್ಲಿ ಚಿಂತಾಮಣಿಯ ವಿಜಯ ಬ್ಯಾಂಕ್‌ಗೆ ವರ್ಗಾವಣೆ ಮಾಡಿದ್ದ ಝುಲ್ಫಿಕಾರುಲ್ಲಾ ಸಿಇಒ ಹೆಸರಿನಲ್ಲಿ ಎರಡು ಚೆಕ್ ಮೂಲಕ ಫಿಕ್ಸೆಡ್ ಡೆಪಾಸಿಟ್ ಮಾಡಿದ್ದರು. ಇದರಿಂದ ವಕ್ಫ್ ಮಂಡಳಿಗೆ 8 ಕೋಟಿ ರೂ.ನಷ್ಟ ಆಗಿದೆ ಎಂದು ದೂರು ನೀಡಲಾಗಿದೆ.
ಸಂಸ್ಥೆಯ ಗಮನಕ್ಕೆ ತರದೇ ಹಣ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಎಸಗಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.