ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ನಡೆಸುತ್ತಿರುವ ಸಮೀಕ್ಷೆಯ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಿಸಿ ಮತ್ತೆ ಆದೇಶಿಸಲಾಗಿದೆ.
ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಡಾ.ಹೆಚ್.ಎನ್.ನಾಗಮೋಹನ್ ದಾಸ್ (Nagamohan Das) ಇವರ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗಕ್ಕೆ ಸಮೀಕ್ಷೆ ಅವಧಿ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.ಇದನ್ನೂ ಓದಿ: ಮೃಣಾಲ್ ಠಾಕೂರ್ ಫ್ಯಾನ್ಸ್ಗೆ ಡಬಲ್ ಧಮಾಕ!
ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ಇನ್ನೂ ಪ್ರಗತಿಯಾಗಬೇಕಾಗಿದೆ. ಹೀಗಾಗಿ ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಅನೇಕ ಪರಿಶಿಷ್ಟ ಜಾತಿ ಸಂಘಗಳ ಮತ್ತು ಬೆಂಗಳೂರು ಮಹಾನಗರ ಪಾಲಿಕೆಯ ಕೋರಿಕೆಯ ಮೇರೆಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಅನುವಾಗುವಂತೆ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ.
ಮನೆ-ಮನೆ ಭೇಟಿ ನೀಡಿ, ಸಮೀಕ್ಷೆಯು ಮೇ 26ರಿಂದ ಮೇ 29ರ ವರೆಗೆ ವಿಸ್ತರಿಸಲಾಗಿದೆ. ವಿಶೇಷ ಶಿಬಿರವನ್ನು (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) 3 ದಿನಗಳ ಕಾಲ ಮೇ 30, 31 ಹಾಗೂ ಜೂನ್ 01ರ ವರೆಗೆ ಮರುನಿಗದಿಪಡಿಸಲಾಗಿದೆ ಮತ್ತು ಆನ್ಲೈನ್ ಮೂಲಕ ಸ್ವಯಂ ಘೋಷಣೆ ದಿನಾಂಕವನ್ನು ಜೂನ್ 01 ರವರೆಗೆ ಮುಂದುವರೆಯಲಿದೆ ಎಂದು ಏಕಸದಸ್ಯ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇದನ್ನೂ ಓದಿ: ರಾಮನಗರಕ್ಕೆ ಬೆಂಗಳೂರು ಹೆಸರು ಸೇರಿದ್ದೇ ಲ್ಯಾಂಡ್ ಮಾಫಿಯಾಕ್ಕಾಗಿ: ಶೋಭಾ ಕರಂದ್ಲಾಜೆ ಕಿಡಿ