ಹುಬ್ಬಳ್ಳಿ: ಪರಿಶಿಷ್ಟ ಸಮುದಾಯ ಈ ಬಾರಿಯೂ ನರೇಂದ್ರ ಮೋದಿಯವರನ್ನೇ (Narendra Modi) ಪ್ರಧಾನಿ ಮಾಡಲು ಸಂಕಲ್ಪ ತೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.
ಲೋಕಸಭಾ ಚುನಾವಣೆ (Lok Sabha Election 2024) ಹಿನ್ನಲೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಎಸ್ಸಿ ಮೋರ್ಚಾ (BJP SC Morcha )ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಮ್ಮ ಕೇಂದ್ರ ಸರ್ಕಾರ ಸಮಾಜದಲ್ಲಿ ಸಮಾನತೆ ತರಲೆಂದು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನರು ಈ ಬಾರಿಯೂ ಮೋದಿ ಬೆಂಬಲಕ್ಕೆ ನಿಂತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Advertisement
Advertisement
ನರೇಂದ್ರ ಮೋದಿಯವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ನೋಡಲು ಸಂಕಲ್ಪ ಮಾಡಿ ಬಿಜೆಪಿ ಎಸ್ಸಿ ಮೋರ್ಚಾ ಮುಖಂಡರು ಮತ್ತು ಪದಾಧಿಕಾರಿಗಳು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರ ಸುಮಾವೇಶ ಹಮ್ಮಿಕೊಂಡಿದ್ದು, ಅಗತ್ಯ ಸಿದ್ಧತೆ ನಡೆದಿದೆ ಎಂದಿದ್ದಾರೆ.
Advertisement
Advertisement
ಸಮಾವೇಶ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭಾನುವಾರವೂ (ಮಾ.31) ಎಲ್ಲಾ ಪದಾಧಿಕಾರಿಗಳ ಪೂರ್ವಭಾವಿ ಸಭೆ ಕರೆದು ಚರ್ಚಿಸಲಾಯಿತು. ಸಭೆಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಪಕ್ಷದ ಪ್ರಮುಖರಾದ ಬಸವರಾಜ ಅಮ್ಮಿನಬಾವಿ, ಮಹೇಂದ್ರ ಕೌತಾಳ ಹಾಗೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.