ಬೆಂಗಳೂರು: ಎಲ್ಲ ತಿಳಿದವರೇ ಸೇರಿ ಪಠ್ಯ ಕ್ರಮ ರಚನೆ ಮಾಡಿದ್ದು, ಹೊಸದಾಗಿ ಸೇರಿಸೋ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಗವದ್ಗೀತೆ ಪಠ್ಯಕ್ಕೆ ಸೇರಿಸುವುದರ ಬಗ್ಗೆ ವಿರೋಧ ವ್ಯಕ್ತಪಡಿಸಿದರು.
Advertisement
ಪಠ್ಯಕ್ರಮಗಳಲ್ಲಿ ಭಗವದ್ಗೀತೆಯನ್ನು ಸೇರಿಸಬೇಕು ಎಂಬುದನ್ನು ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಆರಂಭದಲೇ ನಾನು ಎನ್‍ಇಪಿ ವಿರೋಧ ಮಾಡಿರುವವನು. ಎಲ್ಲ ತಿಳಿದವರೇ ಸೇರಿ ಪಠ್ಯಕ್ರಮ ರಚನೆ ಮಾಡಿದ್ದಾರೆ. ಹೊಸದಾಗಿ ಏನನ್ನೂ ಸೇರಿಸುವ ಅವಶ್ಯಕತೆ ಇಲ್ಲ. ಎಲ್ಲ ಧರ್ಮದ ಆಚಾರ ವಿಚಾರಗಳನ್ನು ಜನ ತಿಳಿದುಕೊಳ್ಳೋದ್ರಲ್ಲಿ ತಪ್ಪಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಗುಜರಾತ್ ಶಾಲಾ, ಕಾಲೇಜ್‍ಗಳಲ್ಲಿ ಭಗವದ್ಗೀತೆ ಕಡ್ಡಾಯ
Advertisement
Advertisement
ಈಗಾಗಲೇ ಭಗವದ್ಗೀತೆ, ರಾಮಾಯಣ, ಇತರ ಧರ್ಮದ ವಿಚಾರಗಳು ಪಠ್ಯದಲ್ಲಿ ಇವೆ. ಕೆಂಗಲ್ ಹನುಮಂತಯ್ಯ ಸಿಎಂ ಆಗಿದ್ದಾಗ ಅವರು ಆಗಲೇ ಎರಡು ರೂಪಾಯಿಗೆ ಭಗವದ್ಗೀತೆ ಪ್ರತಿಗಳನ್ನು ಹಂಚಿದ್ದರು. ಇವರು ಹೊಸದಾಗಿ ದೊಡ್ಡಾದಾಗಿ ಏನ್ ಮಾಡಬೇಕಾಗಿಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ – ಎಲ್ಲ ಮುಸಲ್ಮಾನರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ: ಸೋಮಣ್ಣ