ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ – ಜಮೀರ್

Public TV
1 Min Read
Minister Zameer Ahmed apologizes for his Political Judgement about MUDA Scam high Court verdict 1

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ತಿಳಿಸಿದರು.

ಈಗಾಗಲೇ 6.25 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ 180 ಕೋಟಿ ರೂ. ವರ್ಗಾವಣೆ ಮಾಡಲಾಗಿದ್ದು, 1.60 ಲಕ್ಷ ವಿದ್ಯಾರ್ಥಿಗಳಿಗೆ 100 ಕೋಟಿ ರೂ. ಅನುದಾನ ಅಗತ್ಯವಿರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.ಇದನ್ನೂ ಓದಿ: ಹಾಸನ | ಕುಡಿದ ಮತ್ತಿನಲ್ಲಿ ಕಾರು ಅಡ್ಡಗಟ್ಟಿ ಗುಂಡು ಹಾರಿಸಿದ ಯುವಕ ಅರೆಸ್ಟ್

ವಿದ್ಯಾಸಿರಿ ಯೋಜನೆಯಡಿಯಲ್ಲಿ ಜನವರಿ ಅಂತ್ಯದವರೆಗೆ ಹಾಸ್ಟೆಲ್‌ಗಳಲ್ಲಿ 23 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದ್ದು, ಹಾಸ್ಟೆಲ್‌ನಲ್ಲಿ ಪ್ರವೇಶ ಸಿಗದ 5,753 ವಿದ್ಯಾರ್ಥಿಗಳಿಗೆ ಮಾಸಿಕ 1,500 ರೂ.ನಂತೆ ಹತ್ತು ತಿಂಗಳ ಮೊತ್ತ 15 ಸಾವಿರ ರೂ. ವರ್ಗಾವಣೆ ಮಾಡಲಾಗಿದೆ. ಅದಕ್ಕಾಗಿ 8.63 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇನ್ನೂ 200 ವಿದ್ಯಾರ್ಥಿಗಳ ಆಧಾರ್ ಲಿಂಕ್ ಸಮಸ್ಯೆ ಇದ್ದು, ಅದು ಸರಿಹೋದ ನಂತರ ಅವರಿಗೂ ಹಣ ವರ್ಗಾವಣೆ ಆಗಲಿದ್ದು, ಶೇ.100 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದಂತಾಗಲಿದೆ ಎಂದು ವಿವರಿಸಿದರು.

ನಿರ್ದೇಶನಾಲಯಕ್ಕೆ ಪ್ರಸಕ್ತ ವರ್ಷ 2,292 ಕೋಟಿ ರೂ. ನಿಗದಿಯಾಗಿ 1,941 ಕೋಟಿ ರೂ. ಬಿಡುಗಡೆಯಾಗಿದ್ದು, ಅದರಲ್ಲಿ 1,608 ಕೋಟಿ ರೂ. ಅಂದರೆ ಶೇ. 83ರಷ್ಟು ಖರ್ಚು ಮಾಡಲಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 7,500 ವಿದ್ಯಾರ್ಥಿಗಳಿಗೆ ಅರಿವು ಯೋಜನೆ ಹಾಗೂ ವಿದೇಶಿ ವಿದ್ಯಾಭ್ಯಾಸ ನೆರವು ಯೋಜನೆಯಡಿಯಲ್ಲಿ 92.50 ಕೋಟಿ ರೂ. ಸಾಲ ವಿತರಿಸಲಾಗಿದೆ. ಇದೇ ರೀತಿ ವಕ್ಫ್ ಬೋರ್ಡ್ಗೆ 157 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, 125 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ ಫಿಫ್ಟಿ – ಕೊಹ್ಲಿ ಬ್ಯಾಟಿಂಗ್‌ ಮೋಡಿಗೆ ಸಚಿನ್‌, ಸಂಗಕ್ಕಾರ ದಾಖಲೆ ಉಡೀಸ್‌

Share This Article