ಬಳ್ಳಾರಿ: ಶಾಲೆಗೆ ಹೋಗುತ್ತಿದ್ದ ವೇಳೆ ಬಸ್ ಹರಿದು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
Advertisement
ಬಳ್ಳಾರಿ ಹೊರವಲಯದ ಗುಗರಹಟ್ಟಿಯಲ್ಲಿ ಇಂದು ಮುಂಜಾನೆ 14 ವರ್ಷದ ಬಾಲಕ ಆಕಾಶ್ ಶಾಲೆಗೆ ಸೈಕಲ್ ನಲ್ಲಿ ತೆರಳುತ್ತಿದ್ದ. ಈ ವೇಳೆ ಸೈಕಲ್‍ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಆಕಾಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಾಲಕ ಮೃತಪಡುತ್ತಿದ್ದಂತೆ ಬಸ್ ಚಾಲಕ ಬಸ್ ನಿಲ್ಲಿಸಿ ಓಡಿಹೋಗಿದ್ದಾನೆ.
Advertisement
Advertisement
ಬಾಲಕನ ಪೋಷಕರು ಹಾಗೂ ಸ್ಥಳೀಯರು ರಸ್ತೆ ಮಧ್ಯೆಯೇ ಬಾಲಕನ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಿಂದ ರಸ್ತೆ ಬಂದ್ ಆದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ.
Advertisement
ಘಟನೆ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.