ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಬನವಾಸಿ (Banavasi) ಮತ್ತು ಯಲ್ಲಾಪುರ (Yallapura) ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ಅಜಾಗರೂಕತೆಯಿಂದ ಶಾಲಾ ವಾಹನ ಅಪಘಾತಕ್ಕೀಡಾಗಿದ್ದು, ವೃದ್ಧೆಯೊಬ್ಬರು ಸಾವಪ್ಪಿದ್ದಾರೆ.
Advertisement
ಬನವಾಸಿ ಹೆದ್ದಾರಿಯಲ್ಲಿ ಶಾಲಾ ಬಸ್ ಪಲ್ಟಿ – ಮಹಿಳೆ ಸಾವು
ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವೃದ್ಧೆಯೊಬ್ಬರು ಮೃತಪಟ್ಟಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು 7 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಅಪಘಾತ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಬುಗುಡಿಕೊಪ್ಪದ ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ 766E ರಲ್ಲಿ ಈ ಘಟನೆ ನಡೆದಿದೆ.
Advertisement
Advertisement
ದುರಂತದಲ್ಲಿ ಕಸ್ತೂರಮ್ಮ (60) ಅವರು ಸಾವನ್ನಪ್ಪಿದ್ದು, ಗಾಯಾಳುಗಳನ್ನು ಬನವಾಸಿಯ ಪ್ರಾಥಮಿಕ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿಗೆ ರವಾನೆ ಮಾಡಲಾಗಿದೆ. ರಾಣಿ ಬೆನ್ನೂರಿನ ಪರಿಣಿತಿ ವಿದ್ಯಾ ಮಂದಿರದ ಶಾಲೆಯವರು, ರಾಣಿ ಬೆನ್ನೂರಿನ ಸಿದ್ಧಾರೂಢ ನಗರದಿಂದ ಶಿರಸಿಯತ್ತ ಮಕ್ಕಳನ್ನು ಪ್ರವಾಸಕ್ಕೆ ಕರೆತರುತ್ತಿದ್ದರು. ಈ ವೇಳೆ ಚಾಲಕನ ಅತಿವೇಗದ ಚಾಲನೆಯಿಂದಲೇ ಘಟನೆ ಸಂಭವಿಸಿದ್ದು, ಇದೀಗ ಈ ಸಂಬಂಧ ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ
Advertisement
ಮತ್ತೊಂದೆಡೆ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ 63ರ ಅರೆಬೈಲು ಘಟ್ಟದಲ್ಲಿ ಕೆಟ್ಟು ನಿಂತಿದ್ದ ಟ್ಯಾಂಕರ್‍ಗೆ ಶಾಲಾ ವಾಹ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ ಸುಮಾರು 15 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಗುಜರಾತ್ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ- ಟಿಕೆಟ್ ನಿರಾಕರಿಸಿದ್ದಕ್ಕೆ ಆಪ್ ಸೇರಿದ ಶಾಸಕ
ಹುಬ್ಬಳ್ಳಿಯ ಸೈಂಟ್ ಅಂಥೋನಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಹುಬ್ಬಳಿಯಿಂದ ಅಂಕೋಲಾ ಮಾರ್ಗವಾಗಿ ಸುಂಕಸಾಳದತ್ತ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಘಟ್ಟದಲ್ಲಿ ಓವರ್ ಟೇಕ್ ಮಾಡಲು ಹೋಗಿ ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿಹೊಡೆದಿದೆ. ಇದರ ಪರಿಣಾಮ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.