ಬಳ್ಳಾರಿ: ಹಂಪಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಬೆಂಕಿ ತಗುಲಿ ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಹೊಸಪೇಟೆ ಬೈಪಾಸ್ ನಲ್ಲಿ ನಡೆದಿದೆ.
ಹುನಗುಂದ ತಾಲೂಕಿನ ವಜ್ಜಲ ಗ್ರಾಮದ ಸರ್ಕಾರಿ ಶಾಲೆಯಿಂದ 16 ಮಕ್ಕಳು ಮತ್ತು ಮೂವರು ಶಿಕ್ಷಕರು ಗುರುವಾರ ಮುಂಜಾನೆ ಶಾಲಾ ಮಕ್ಕಳು ಹಂಪಿಗೆ ಪ್ರವಾಸಕ್ಕೆ ಆಗಮಿಸಿದ್ದರು. ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಹಂಪಿ ಪ್ರವಾಸಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಬಸ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಬಸ್ ನಲ್ಲಿದ್ದ 16 ಮಕ್ಕಳನ್ನು ಬಸ್ ಸಿಬ್ಬಂದಿ ಹಾಗೂ ಸ್ಥಳೀಯರು ಬಸ್ ಗಾಜುಗಳನ್ನು ಒಡೆದು ರಕ್ಷಣೆ ಮಾಡಿದ್ದಾರೆ.
Advertisement
Advertisement
ಘಟನೆ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಅದೃಷ್ಟವಶಾತ್ ಬಹುದೊಡ್ಡ ಅನಾಹುತ ತಪ್ಪಿದಂತಾಗಿದೆ. ಬಸ್ ನಿಂದ ರಕ್ಷಣೆ ಮಾಡಿದ ಶಾಲಾ ಮಕ್ಕಳನ್ನು ಬೇರೆ ವಾಹನದ ವ್ಯವಸ್ಥೆ ಮಾಡಿ ಮಾಜಿ ಶಾಸಕ ಆನಂದಸಿಂಗ್ ಊರಿಗೆ ಕಳುಹಿಸಿಕೊಟ್ಟಿದ್ದಾರೆ. ಈ ಘಟನೆ ಸಂಬಂಧ ಹೊಸಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement