Connect with us

Bellary

20ಕ್ಕೂ ಹೆಚ್ಚು ಮಕ್ಕಳಿದ್ದ ಶಾಲಾ ವಾಹನ ಪಲ್ಟಿ

Published

on

ಬಳ್ಳಾರಿ: ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ವಾಹನವೊಂದು ಪಲ್ಟಿ ಆಗಿರುವ ಘಟನೆ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ನಡೆದಿದೆ.

ಜೆ.ಎಸ್.ಎಸ್.ಪಬ್ಲಿಕ್ ಶಾಲಾ ವಾಹನ ಇದಾಗಿದ್ದು, ಹೂವಿನ ಹಡಗಲಿ ಪಟ್ಟಣದ ಹೊರವಲಯದಲ್ಲಿ ಶಾಲೆ ಇದೆ. ಶಾಲೆ ಮುಗಿಸಿಕೊಂಡು ನಗರದ ಹೊರವಲಯದಿಂದ ಮಕ್ಕಳನ್ನು ಮನೆಗೆ ಬಿಡುವ ಸಮಯದಲ್ಲಿ ಈ ಘಟನೆ ನಡೆದಿದೆ.

ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಶಾಲಾ ವಾಹನದಲ್ಲಿ 20ಕ್ಕೂ ಹೆಚ್ಚು ಮಕ್ಕಳಿದ್ದರು. ಈ ಘಟನೆಯಲ್ಲಿ 5 ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ತಕ್ಷಣ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿದ ಮಕ್ಕಳ ಪೋಷಕರು ಸರ್ಕಾರಿ ಆಸ್ಪತ್ರೆಗೆ ದೌಡಾಯಿಸಿ ತಮ್ಮ ಮಕ್ಕಳಿಗೆ ಯಾವುದೇ ಗಂಭೀರ ಗಾಯಗಳಾಗಿರದನ್ನು ಕಂಡು ನಿಟ್ಟುಸಿರು ಬಿಟ್ಟಿದ್ದಾರೆ. ಈ ಘಟನೆಯ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

Click to comment

Leave a Reply

Your email address will not be published. Required fields are marked *