ನವದೆಹಲಿ: ಗಾಜಿಯಾಬಾದ್ (Ghaziabad) ಬಳಿಯ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ (Delhi-Meerut Expressway) ಮಂಗಳವಾರ ಭೀಕರ ರಸ್ತೆ ಅಪಘಾತ (Bus Accident) ಸಂಭವಿಸಿ ಆರು ಮಂದಿ ಸಾವನ್ನಪ್ಪಿದ್ದಾರೆ. ಶಾಲಾ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಖಾಲಿ ಇದ್ದ ಬಸ್ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿತ್ತು, ಇದೇ ಮಾರ್ಗದಲ್ಲಿ ವೇಗವಾಗಿ ಬಂದ ಕಾರ್ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: 6 ಮಂದಿ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ನೇಪಾಳದಲ್ಲಿ ನಾಪತ್ತೆ
Advertisement
Advertisement
ಅಪಘಾತದ ಕುರಿತು ಪ್ರತಿಕ್ರಿಯಿಸಿದ ಎಡಿಸಿಪಿ ಆರ್‌ಕೆ ಕುಶ್ವಾಹ, ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ದೆಹಲಿಯ ಗಾಜಿಪುರದಿಂದ ಸಿಎನ್‌ಜಿ ಪಡೆದು ಬಸ್ ಚಾಲಕ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ, ಟಿಯುವಿ ಮೀರತ್‌ನಿಂದ ಗುರುಗ್ರಾಮ್‌ಗೆ ತೆರಳುತ್ತಿತ್ತು.
Advertisement
Advertisement
ಪ್ರಕರಣದಲ್ಲಿ ಬಸ್ ಚಾಲಕನದ್ದು ನೇರ ತಪ್ಪು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಒಂದೇ ಕುಟುಂಬದವರಾಗಿದ್ದು, ಬಸ್‌ನಲ್ಲಿ ವಿದ್ಯಾರ್ಥಿಗಳು ಇರಲಿಲ್ಲ. ಸದ್ಯ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಂಗಾಳ ಪಂಚಾಯತ್ ಚುನಾವಣೆ ಮತ ಎಣಿಕೆ ವೇಳೆ ಮತ್ತೆ ಘರ್ಷಣೆ – ಕಚ್ಚಾಬಾಂಬ್ ಸ್ಫೋಟ
Web Stories