ಉಡುಪಿ: ಮಣಿಪಾಲ್ (Manipal) ಬಳಿಯ ಕೊಡಂಗೆಯಲ್ಲಿ ಶಾಲಾ ಬಸ್ (School Bus) ಕಂದಕಕ್ಕೆ ಉರುಳಿ ಬಿದ್ದು (Accident), ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮಣಿಪಾಲದ ಖಾಸಗಿ ಶಾಲೆಗೆ ಸೇರಿದ ಬಸ್ ಮಕ್ಕಳನ್ನು ಕರೆದುಕೊಂಡು ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್‌ನಲ್ಲಿದ್ದ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿಗೆ ತಲೆಗೆ ತೀವ್ರ ಪೆಟ್ಟಾಗಿದೆ. ಇದನ್ನೂ ಓದಿ: 15 ದಿನದ ಹಿಂದಷ್ಟೇ ಉದ್ಘಾಟನೆಯಾದ ಕೃಷ್ಣಪಥ ಹೆದ್ದಾರಿ ಈಗ ಸಾವಿನ ಹೈವೇ
ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿದ್ದಾರೆ. ಘಟನೆ ಕುರಿತು ಮಣಿಪಾಲ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಧಗ ಧಗ ಧಗ – ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್ ಲಾರಿ
