ಬೆಂಗಳೂರು: ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿ ನರ್ಸರಿ ಶಾಲೆಯ ಸಿಬ್ಬಂದಿ ಒಬ್ಬನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮಂಜುನಾಥ್ ಅಲಿಯಾಸ್ ಮಂಜ ಬಂಧಿತ ಆರೋಪಿ. ಪ್ರಾಂಶುಪಾಲೆ ನಿರ್ಲಕ್ಷ್ಯ ವಿರುದ್ಧ ಪೋಷಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಈಗ ಶಾಲೆಯ ಪ್ರಾಂಶುಪಾಲೆಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Advertisement
ಏನಿದು ಪ್ರಕರಣ?
ನರ್ಸರಿ ಶಾಲೆಯಲ್ಲಿ ಸಿಸಿ ಕ್ಯಾಮರಾ ನಿರ್ವಹಣೆ ಮಾಡುತ್ತಿದ್ದ ಅರೋಪಿ ಮಂಜುನಾಥ್ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಫೆ.17ರಂದು ಸ್ಕೂಲ್ ನಿಂದ ಕಣ್ಣೀರಿಡುತ್ತಾ ಮನೆಗೆ ಬಂದಾಗ ಪೋಷಕರು ಬಾಲಕಿಯನ್ನು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಫೆ. 18ರಂದು ಬಾಲಕಿಯ ಪೋಷಕರು ಬಾಲಕಿಯಿಂದ ಹೇಳಿಕೆ ನೀಡಿ ಮಾರತಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಈಗ ಆರೋಪಿಯನ್ನು ಬಂಧಿಸಿದ್ದಾರೆ.
Advertisement
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕೆ ಇಂದು ಶಾಲೆಯ ಬಳಿ ಹಲವು ಪೋಷಕರು ಜಮಾಯಿಸಿ ಪ್ರತಿಭಟನೆ ನಡೆಸಿದರು.
Advertisement
ಏನಿದು ಪೋಕ್ಸೋ ಕಾಯ್ದೆ?
ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಅಧಿನಿಯಮ ಮತ್ತು ನಿಯಮಗಳು(ಪೋಕ್ಸೋ) ಜಾರಿಗೆ ತರಲಾಗಿದೆ. ಪೋಕ್ಸೋ ಪ್ರಕಾರ 18 ವರ್ಷದೊಳಗಿನವರನ್ನು ಮಗು ಎಂದು ಪರಿಗಣಿಸಲಾಗುತ್ತದೆ. ಅತ್ಯಾಚಾರ, ಗುಪ್ತಾಂಗ ಮುಟ್ಟುವುದು, ಲೈಂಗಿಕತೆಗೆ ಪ್ರಚೋದಿಸುವುದು,ಅಶ್ಲೀಲ ಚಿತ್ರಗಳ ಬಳಕೆ, ಮಗುವಿನ ಅಶ್ಲೀಲ ಚಿತ್ರ ಸಂಗ್ರಹಿಸಿದರೆ ಅದು ಈ ಕಾಯ್ದೆಯ ಪ್ರಕರ ಅಪರಾಧ ಎಂದು ಪರಿಗಣಿಸಲ್ಪಡುತ್ತದೆ.