DistrictsHassanKarnatakaLatestMain Post

ವಸತಿ ಶಾಲೆಯ 13 ಮಕ್ಕಳಲ್ಲಿ ಕೊರೊನಾ ದೃಢ – ಪೋಷಕರಲ್ಲಿ ಆತಂಕ

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ವಸತಿ ಶಾಲೆಯ 13 ಮಂದಿ ಹೈಸ್ಕೂಲ್ ವಿದ್ಯಾರ್ಥಿಗಳಲ್ಲಿ ಇಂದು ಕೋವಿಡ್ ಪಾಸಿಟಿವ್ ಕಂಡುಬಂದಿದೆ.

ಆರೋಗ್ಯ ಇಲಾಖೆಯಿಂದ ಶಾಲೆಯ 200 ಮಕ್ಕಳಿಗೆ ಕೋವಿಡ್ ಟೆಸ್ಟ್ ಮಾಡಿಸಿದಾಗ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಶಾಲೆಯ ಇತರ ಮಕ್ಕಳು ಮತ್ತು ಪೋಷಕರು ಆತಂಕಗೊಂಡಿದ್ದಾರೆ. ಇದನ್ನೂ ಓದಿ: ವಿದೇಶಗಳಲ್ಲಿ ಓಮಿಕ್ರಾನ್ ಅಬ್ಬರ – ರಾಜ್ಯದಲ್ಲಿ ವ್ಯಾಕ್ಸಿನ್ ಪಡೆಯಲು ಕ್ಯೂ ನಿಂತ ಜನ

ಈ ಮೂಲಕ ಕೋವಿಡ್-19 ಅಲೆಯ ಮೂರನೇ ಹಂತದಲ್ಲಿ ಹೆಚ್ಚು ಹೆಚ್ಚಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬರುತ್ತಿರುವುದು ಮತ್ತೆ ಸಾಬೀತಾಗಿದೆ. ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಲು ಶಾಲೆಗೆ ಸೂಚನೆ ನೀಡಲಾಗಿದೆ.  ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತ, ನೃತ್ಯ ನಿರ್ದೇಶಕ ಶಿವಶಂಕರ್ ಕೊರೊನಾದಿಂದ ಸಾವು

ಕಳೆದ ಕೆಲ ದಿನಗಳಿಂದ ಮಕ್ಕಳಲ್ಲಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಿದ ಸಂದರ್ಭದಲ್ಲಿ ಸೋಂಕು ದೃಢಪಟ್ಟಿದೆ.

Leave a Reply

Your email address will not be published.

Back to top button