Bengaluru City

ಮರ ಕಡಿಯದಂತೆ ಮರಗಳನ್ನು ಅಪ್ಪಿಕೊಂಡು ಶಾಲಾ ಮಕ್ಕಳ ಪ್ರತಿಭಟನೆ

Published

on

Share this

-ಏಕಾಏಕಿ ರಸ್ತೆ ಅಗಲೀಕರಣಕ್ಕೆ ಮುಂದಾದ ಪಾಲಿಕೆ

ಬೆಂಗಳೂರು: ತಮ್ಮ ಶಾಲೆಯ ಆವರಣದ ಆಟದ ಮೈದಾನದಲ್ಲಿರುವ ಮರಗಳನ್ನು ಕಡಿಯದಂತೆ ಆಗ್ರಹಿಸಿ ಪೀಣ್ಯ ದಾಸರಹಳ್ಳಿಯ ಅಬ್ಬಿಗೆರೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಅಪ್ಪಿಕೋ ಚಳುವಳಿ ರೀತಿಯಲ್ಲಿ ಪ್ರತಿಭಟನೆ ನೆಡೆಸಿದ್ದಾರೆ.

ರಸ್ತೆಯನ್ನು ವಿಸ್ತರಣೆ ಮಾಡಲು ಮರಗಳನ್ನು ಕಡಿಯಲು ಬಿಬಿಎಂಪಿ ಏಕಾಏಕಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಅಬ್ಬಿಗೆರೆ ಸರ್ಕಾರಿ ಶಾಲಾ ಮಕ್ಕಳು ಕೈಯಲ್ಲಿ ನಾಮಫಲಕಗಳನ್ನು ಹಿಡಿದು, ಮರಗಳನ್ನು ಸುತ್ತುವರಿದು ತಬ್ಬಿಕೊಂಡು ಕಡಿಯದಂತೆ ಶಾಲಾ ಆವರಣದಲ್ಲಿ ಮನವಿ ಮಾಡಿ, ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: 24 ಗಂಟೆಯೊಳಗೆ ರೈತರ ಪಂಪ್‍ಸೇಟ್‍ಗೆ ಟ್ರಾನ್ಸ್​ಫಾರ್ಮರ್ ವ್ಯವಸ್ಥೆ ಮಾಡಿ: ಸುನಿಲ್ ಕುಮಾರ್

ಅಬ್ಬಿಗೆರೆ ಸರ್ಕಾರಿ ಶಾಲೆ ಆವರಣದಲ್ಲಿರುವ ಮೈದಾನದಲ್ಲಿ 100ಕ್ಕೂ ಹೆಚ್ಚು ಮರಗಳಿವೆ. ಅಬ್ಬಿಗೆರೆಯಿಂದ ಚಿಕ್ಕಬಾಣಾವರಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯನ್ನು ಅಗಲೀಕರಣ ಮಾಡಲು ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ. ಈ ಅಗಲೀಕರಣ ಅವೈಜ್ಞಾನಿಕವಾಗಿದ್ದು ಯಾವುದೇ ಕಾರಣಕ್ಕೂ ಮುಂದುವರೆಸದಂತೆ ಪ್ರತಿಭಟನೆ ಮಾಡಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ನಕಲಿ ಟಿಕೆಟ್ ನೀಡಿ 2 ಲಕ್ಷ ವಂಚನೆ

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications