ಹಾವೇರಿ: ಶಿಕಾರಿಪುರ ಏತ ನೀರಾವರಿ ಯೋಜನೆಗೆ ವಿರೋಧಿಸಿ ತರಗತಿ ಬಹಿಷ್ಕರಿಸಿ ಸರ್ಕಾರಿ ಶಾಲೆ ಮಕ್ಕಳು ಪ್ರತಿಭಟನೆ ಮಾಡಿದ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದಲ್ಲಿ ನಡೆದಿದೆ.
ಹಳ್ಳೂರು ಗ್ರಾಮದ ನವಶಿಲಾಯುಗ ಕೋಟೆ ಪ್ರದೇಶದಲ್ಲಿ ಕಾಮಗಾರಿ ಮಾಡಲಾಗುತ್ತಿದೆ. ಇದು ಸುಮಾರು ಸಾವಿರಾರು ವರ್ಷಗಳ ಇತಿಹಾಸ, ನವ ಶಿಲಾಯುಗದ ಕುರುಹುಗಳು ಪತ್ತೆ ಆಗಿದ್ದ ಕೋಟೆ ಪ್ರದೇಶವಾಗಿದೆ. ಇತಿಹಾಸ ಹಾಳು ಮಾಡಿ ಕಾಮಗಾರಿ ಮಾಡ್ತಿರೋದಕ್ಕೆ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.
Advertisement
Advertisement
ಕೋಟೆ ಪ್ರದೇಶದ ಬಳಿ ಇರುವ ತುಂಗಭದ್ರಾ ನದಿಯಿಂದ ಕೆರೆಗಳಿಗೆ ನೀರು ತುಂಬಿಸೋ ಯೋಜನೆ ಮಾಡಲಾಗುತ್ತಿದೆ. ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಕೆರೆಗಳಿಗೆ ನೀರು ತುಂಬಿಸೋ ಯೋಜನೆ ಕಾಮಗಾರಿಗೆ ಕೋಟೆ ಪ್ರದೇಶದಲ್ಲಿ ಜಾಗವನ್ನು ಸರ್ಕಾರ ನೀಡಿದೆ.
Advertisement
Advertisement
ಕೋಟೆ ಪ್ರದೇಶವನ್ನ ಕೈ ಬಿಡಬೇಕು. ಒಂದು ವೇಳೆ ಇದು ಹೀಗೆ ಮುಂದುವರೆದರೆ ಪ್ರತಿಭಟನೆ ಮಾಡೋದಾಗಿ ಶಾಲಾ ಮಕ್ಕಳು ಎಚ್ಚರಿಕೆ ನೀಡಿದ್ದಾರೆ. ಐತಿಹಾಸಿಕ ಜಾಗವನ್ನ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.