ಬೆಂಗಳೂರು: ಹೈಕೋರ್ಟ್ (High Court) ಆದೇಶ ಮತ್ತು ಐಎಂಎ (IMA) ನಡೆಸುತ್ತಿದ್ದ ಶಾಲೆ (School) ಬಂದ್ ಮಾಡುವ ಬಗ್ಗೆ ಯಾವುದೇ ಮಾಹಿತಿ ನಮಗೆ ಬಂದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (BC Nagesh) ತಿಳಿಸಿದರು.
IMA ನಡೆಸುತ್ತಿದ್ದ ಶಾಲೆ ಕ್ಲೋಸ್ ಮಾಡಲು ಹೈಕೋರ್ಟ್ ಆದೇಶ ನೀಡಿರುವ ವಿಚಾರಕ್ಕೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕೋರ್ಟ್ ಆದೇಶ ಏನೇ ಇದ್ದರೂ ಮಕ್ಕಳ (Student) ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗದಂತೆ ನಾವು ಜವಾಬ್ದಾರಿ ತೆಗೆದುಕೊಳ್ಳುತ್ತೇವೆ. ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕೂಡಲೇ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಬಗ್ಗೆ ತಿಳಿಸಲು ಸೂಚನೆ ನೀಡುತ್ತೇನೆ ಎಂದು ಭರವಸೆ ನೀಡಿದರು.
Advertisement
Advertisement
ಅಧಿಕಾರಿಗಳಿಂದ ಘಟನೆಯ ಕುರಿತು ಕೂಡಲೇ ಸಂಪೂರ್ಣ ವರದಿ ಪಡೆಯುತ್ತೇನೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಮಸ್ಯೆ ಆಗದಂತೆ ನಾವು ಕ್ರಮವಹಿಸುತ್ತೇವೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
Advertisement
Advertisement
ಐಎಂಎ ಬಹು ಕೋಟಿ ವಂಚನೆ ಪ್ರಕರಣದಲ್ಲಿ ಈಗಾಗಲೇ ಆಸ್ತಿ ಮುಟ್ಟುಗೋಲು ಹಾಕಿ ಹೂಡಿಕೆದಾರರ ಹಣವನ್ನು ವಾಪಸ್ ಕೊಡುವ ಪ್ರಕ್ರಿಯೆ ನಡೆಯುತ್ತಿದೆ. ಹೈಕೋರ್ಟ್ ಆದೇಶದಂತೆ ನಿನ್ನೆ ರಾತ್ರಿ ಐಎಂಐ ನಡೆಸುತ್ತಿದ್ದ ಶಿವಾಜಿನಗರ ಭಾರತಿನಗರದ ನೆಹರೂ ಸ್ಕೂಲ್ ಆಸ್ತಿಯೂ ಕೂಡ ಸೀಜ್ ಆಗಿದ್ದು ನೋಟಿಸ್ ಅಂಟಿಸಲಾಗಿದೆ. ಇದರ ಅರಿವೇ ಇಲ್ಲದೇ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬಂದ ಪೋಷಕರಿಗೆ ಶಾಲೆ ಸೀಜ್ ಆಗಿದ್ದು ನೋಡಿ ಫುಲ್ ಶಾಕ್ ಆಗಿದ್ದಾರೆ. ಶಾಲಾ ಆವರಣದಲ್ಲಿ ಧರಣಿ ಕೂತರು. ಸ್ಥಳಕ್ಕೆ ಬಂದ ಪೊಲೀಸರು ಪೋಷಕರನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಟ್ಟರು. ಪೋಷಕರ ಪ್ರತಿಭಟನೆಗೆ ಎಎಪಿ ಕೂಡ ಸಾಥ್ ಕೊಟ್ಟಿತ್ತು. ಇದನ್ನೂ ಓದಿ: ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ ನಾಪತ್ತೆ
ಗಲಾಟೆ ಜೋರಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಶಾಸಕ ರಿಜ್ವಾನ್ ಅರ್ಷದ್, ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ರಕಾಶ್ ಸೋಮವಾರ ಶಿಕ್ಷಣ ಇಲಾಖೆಯ ಜೊತೆ ಪೋಷಕರ ಜೊತೆ ಸಭೆ ನಡೆಸುವುದಾಗಿ ಹೇಳಿದರು. ಆದರೆ ಪೋಷಕರು ಅನುದಾನಿತ ಅಥವಾ ಸರ್ಕಾರಿ ಶಾಲೆಗೆ ದಾಖಲಾತಿ ಮಾಡಿ ಪರ್ಯಾಯ ವ್ಯವಸ್ಥೆ ಬೇಕಾಗಿಲ್ಲ. ಇದೇ ಶಾಲೆಯಲ್ಲಿ ಮುಂದುವರಿಸಿ ಎಂದು ಪಟ್ಟು ಹಿಡಿದರು. ಆದರೆ ಇಲ್ಲಿ ಮುಂದುವರಿಸಲು ಅಸಾಧ್ಯ, ಸೋಮವಾರ ಸಭೆಯಲ್ಲಿ ಮುಂದಿನ ನಿರ್ಧಾರ ತೆಗೆದುಕೊಳ್ಳೋಣ ಎಂದು ಸಮಾಧಾನ ಪಡಿಸಿದರು. ಇದನ್ನೂ ಓದಿ: IMA ನಡೆಸುತ್ತಿದ್ದ ಸ್ಕೂಲ್ ಬಂದ್‍ಗೆ ಹೈಕೋರ್ಟ್ ಆದೇಶ- ಮಕ್ಕಳ ಭವಿಷ್ಯದ ಬಗ್ಗೆ ಕಂಗಾಲಾದ ಪೋಷಕರು