– ವಿದ್ಯಾರ್ಥಿಗಳಿಗೆ ಹೂವು ನೀಡಿ ಸ್ವಾಗತಿಸಿದ ಶಿಕ್ಷಕರು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಏರಿಳಿತದ ನಡುವೆಯೇ ಇಂದಿನಿಂದ ಶಾಲಾ, ಕಾಲೇಜು ಆರಂಭವಾಗಿದ್ದು, ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಶಾಲಾ, ಕಾಲೇಜುಗಳತ್ತ ಮುಖ ಮಾಡುತ್ತಿದ್ದಾರೆ.
Advertisement
ಕೊಡಗಿನ ಬಹುತೇಕ ಕಡೆಗಳಲ್ಲಿ ಬೆಳಗ್ಗೆಯಿಂದಲೂ ವಿದ್ಯಾರ್ಥಿಗಳು ಶಾಲೆಗಳಿಗೆ ತೆರಳುತ್ತಿದ್ದಾರೆ. ಶಿಕ್ಷಕರು ಸಹ ಅಷ್ಟೇ ಖುಷಿಯಿಂದ ವಿದ್ಯಾರ್ಥಿಗಳಿಗೆ ಹೂವು ನೀಡಿ ಸ್ವಾಗತಿಸಿದರು. ಮಡಿಕೇರಿ ನಗರದ ಪದವಿಪೂರ್ವ ಕಾಲೇಜು, ಪ್ರೌಢಶಾಲೆಗಳಲ್ಲಿ ಸ್ವಾಗತ ಮಾಡಿದ ಶಿಕ್ಷಕರು, 9 ರಿಂದ ಪಿಯುಸಿ ವರೆಗಿನ ತರಗತಿಗಳು ಆರಂಭವಾಗುತ್ತಿರುವುದಕ್ಕೆ ಖುಷಿ ವ್ಯಕ್ತ ಪಡಿಸಿದರು. ಇದನ್ನೂ ಓದಿ: ಹಟ್ಟಿ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಪುತ್ರನ ಗುಂಡಾಗಿರಿ, ಎಫ್‍ಐಆರ್ ದಾಖಲು
Advertisement
Advertisement
ಶಾಲೆಗಳಿಗೆ ಬರುವ ವಿದ್ಯಾರ್ಥಿಗಳಿಗೆ ಕೋವಿಡ್ ನಿಯಮಗಳ ಪ್ರಕಾರ ಥರ್ಮಲ್ ಸ್ರ್ಕೀನಿಂಗ್, ಸ್ಯಾನಿಟೈಸ್ ಮಾಡಿ, ಸಾಮಾಜಿಕ ಅಂತರ ಕಾಯ್ದುಕೊಂಡು ಬೋಧನೆ ಮಾಡಲು ಮುಂದಾಗಿದ್ದಾರೆ. ಕಳೆದ ಒಂದೂವರೆ ವರ್ಷದ ಬಳಿಕ ಶಾಲೆ ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಶಾಲಾ, ಕಾಲೇಜುಗಳಿಗೆ ಬರುತ್ತಿದ್ದಾರೆ.
Advertisement
ಇಷ್ಟು ದಿನ ಆನ್‍ಲೈನ್ ಶಿಕ್ಷಣ ಸರಿಯಾಗಿ ಅರ್ಥ ಆಗುತ್ತಿರಲಿಲ್ಲ. ಶಾಲೆಗಳು ಆರಂಭ ಆಗಿರುವುದು ಒಳ್ಳೆಯ ಬೆಳವಣಿಗೆ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಶಾಲಾ, ಕಾಲೇಜುಗಳಿಗೆ ಕಳುಹಿಸಿದ್ದಕ್ಕೆ ಪೋಷಕರಲ್ಲಿ ಸ್ವಲ್ಪ ಆತಂಕ ಮನೆ ಮಾಡಿದೆ. 18 ವರ್ಷದ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ವ್ಯಾಕ್ಸಿನೇಷನ್ ಮಾಡಲಾಗಿದೆ. ಆದರೆ ಪ್ರೌಢ ಶಾಲೆ ಮಕ್ಕಳಿಗೆ ವ್ಯಾಕ್ಸಿನೇಷನ್ ಮಾಡಿಲ್ಲ, ಹೀಗಾಗಿ ಭಯದಲ್ಲೇ ಶಾಲೆಗೆ ಕಳುಹಿಸುತ್ತಿದೇವೆ. ರಾಜ್ಯ ಸರ್ಕಾರ ಶೀಘ್ರ ಮಕ್ಕಳಿಗೂ ವ್ಯಾಕ್ಸಿನ್ ನೀಡಬೇಕು ಎಂದು ಪೋಷಕರು ಮನವಿ ಮಾಡುತ್ತಿದ್ದಾರೆ.