Karnataka

ಸೆ.17 ರಿಂದ ಕೊಡಗಿನಲ್ಲಿ ಶಾಲಾ-ಕಾಲೇಜು ಆರಂಭ

Published

on

Share this

ಮಡಿಕೇರಿ: ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆ ಆದ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಶುಕ್ರವಾರದಿಂದ ಶಾಲಾ-ಕಾಲೇಜು ಆರಂಭಿಸಲು ನಿರ್ಧರಿಸಲಾಗಿದೆ.

ಸೆಪ್ಟೆಂಬರ್ 17 ರಿಂದ ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಶಾಲೆ ಆರಂಭದ ಕುರಿತು ಡಿಡಿಪಿಐ ಮತ್ತು ಡಿಡಿಪಿಯು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸೆಪ್ಟಂಬರ್ 17ರಿಂದ ಶಾಲಾ-ಕಾಲೇಜು ಆರಂಭಿಸಲು ನಿರ್ಧರಿಸಿದ್ದಾರೆ. 6 ರಿಂದ 10ನೇ ತರಗತಿ ಮತ್ತು ಪಿಯು ತರಗತಿಗಳು ಆರಂಭವಾಗಲಿದ್ದು, ಈ ಕುರಿತು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್‍ನಿಂದ ಜಿಲ್ಲಾಧಿಕಾರಿಗಳಿಗೆ ದೂರು

ಕೊಡಗಿನಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗಿದ್ದು, ಸೋಮವಾರ 31 ಪ್ರಕರಣಗಳು ವರದಿಯಾಗಿವೆ. 494 ಸಕ್ರಿಯ ಪ್ರಕರಣಗಳಿವೆ. ಕೊರೊನಾ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಕಡಿಮೆಯಾಗುತ್ತಿರುವುದರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮಕ್ಕಳು ಶಾಲೆಗೆ ತೆರಳುತ್ತಿದ್ದಾರೆ. ಇದೀಗ ಕೊಡಗಿನಲ್ಲಿ ಸಹ ಶಾಲಾ-ಕಾಲೇಜುಗಳನ್ನು ತೆರೆಯಲಾಗುತ್ತಿದೆ.

Click to comment

Leave a Reply

Your email address will not be published. Required fields are marked *

Advertisement
Advertisement