ಬೆಳಗಾವಿ: ಪಕ್ಕದ ಮನೆಗ ಓದಲು ಹೋಗಿ ವಾಪಸ್ ಮನೆಗೆ ಬರುವಾಗ ಕಬ್ಬಿನ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಎಂಟು ವರ್ಷದ ಶಾಲಾ ಬಾಲಕಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
- Advertisement 2
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಹುಲಿಕಟ್ಟಿ ಗ್ರಾಮದ ಚೂನವ್ವ ಸರ್ವಿ(8) ಮೃತ ದುರ್ದೈವಿ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತುಂಡರಿಸಿ ಬಿದ್ದಿದ್ದ ತಂತಿಯ ಮೇಲೆ ಕಾಲಿಟ್ಟು ವಿದ್ಯುತ್ ಸ್ಪರ್ಶಿಸಿ ಚೂನವ್ವ ಸರ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಘಟನೆ ಜೂ.24ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಪ್ರೇಯಸಿ ದೂರಾಗಿದ್ದಕ್ಕೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದು ಪ್ರಾಣ ಬಿಟ್ಟ!
- Advertisement 3
- Advertisement 4
ಇದೀಗ ಬಾಲಕಿ ಸಾವಿಗೆ ಕಾರಣರಾದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು, ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಡೀಸೆಲ್ ಕೊರತೆ- ಇಂದು ಸಂಜೆಯೊಳಗೆ ಸಮಸ್ಯೆ ಬಗೆಹರಿಸುತ್ತೇವೆ: BMTC ಎಂಡಿ ಸ್ಪಷ್ಟನೆ