ಮಡಿಕೇರಿ: ಸಿಲಿಕಾನ್ ಸಿಟಿಯಲ್ಲಿ ಕೋವಿಡ್ ಕಡಿಮೆ ಆಗಲಿ ಅಥವಾ ಜಾಸ್ತಿ ಆಗಲಿ ಫೆಬ್ರವರಿ ಆರಂಭದಿಂದಲೇ ಬೆಂಗಳೂರಿನಲ್ಲಿ ಶಾಲೆ ಆರಂಭವಾಗುತ್ತವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸುಳಿವು ನೀಡಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡಿನಲ್ಲಿ ಮಾತಾನಾಡಿದ ಅವರು, ಕಳೆದ ವಾರದ ಕೋವಿಡ್ ಸಂಬಂಧ ಸಭೆ ನಡೆಸುವ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಶಾಲೆ ಆರಂಭಿಸುವ ಬಗ್ಗೆ ಚರ್ಚಿಸಲಾಗಿತ್ತು. ಇದೇ 29 ರಂದು ನಡೆಯುವ ಸಭೆಯಲ್ಲಿ ಶಾಲೆಗಳ ಅರಂಭ ಮಾಡುವ ಬಗ್ಗೆ ನಿರ್ಧಾರ ಮಾಡುವುದಾಗಿ ತಿಳಿಸಿದರು.
Advertisement
Advertisement
ಈಗಾಗಲೇ ಬೆಂಗಳೂರಿನಲ್ಲಿ ಪ್ರತಿದಿನ ಕೋವಿಡ್ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಹೀಗಾಗಿ ಶಾಲೆಗಳನ್ನು ಓಪನ್ ಮಾಡುವ ಸಾಧ್ಯತೆಗಳು ಜಾಸ್ತಿ ಇದೆ. ಈಗಾಗಲೇ ತಜ್ಞರು ಮೂರನೇ ಅಲೆಯಲ್ಲಿ ಹೇಳಿದಂತೆ ರಾಜ್ಯದಲ್ಲಿ ಒಟ್ಟು 77ಸಾವಿರ ಶಾಲೆಯನ್ನು ಪ್ರಾರಂಭಿಸಿದ್ದೇವೆ. ಐದು ಜಿಲ್ಲೆಗಳಲ್ಲಿ ಶಾಲೆಗಳನ್ನೇ ಬಂದ್ ಮಾಡಿಲ್ಲ. 19 ಜಿಲ್ಲೆಗಳಲ್ಲಿ 246 ಶಾಲೆಗಳನ್ನು ಬಂದ್ ಮಾಡಲಾಗಿತ್ತು. ಅದು ಕೂಡ 3ರಿಂದ 7 ದಿನ ಬಂದ್ ಮಾಡಿದ್ದೆವು. ಪೂರ್ಣವಾಗಿ ಬಂದ್ ಮಾಡಿದ್ದು ಅಂದರೆ ದೊಡ್ಡ ನಗರಗಳಲ್ಲಿ ಧಾರವಾಡ, ಹುಬ್ಬಳ್ಳಿ, ಮೈಸೂರು, ಮಂಡ್ಯ, ಹಾಗೂ ಬೆಂಗಳೂರಿನ ಮಹಾನಗರಗಳಲ್ಲಿ ಮಾತ್ರ ಎಂದು ಹೇಳಿದರು.
Advertisement
Advertisement
ಈಗಾಗಲೇ ಎಲ್ಲಾ ಕಡೆಗಳಲ್ಲಿ ಶಾಲೆಗಳು ಆರಂಭವಾಗಿದೆ. ಹತ್ತನೇ ತರಗತಿಯ ಪರೀಕ್ಷೆ ದಿನಾಂಕವನ್ನು ನಿಗದಿ ಮಾಡಲಾಗಿದೆ. ಇದೇ ರೀತಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತದೆ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ. ಮಾಚ್9 28 ರಿಂದ ಎಸ್‍ಎಸ್ ಎಲ್‍ಸಿ ಪರೀಕ್ಷೆ ದಿನಾಂಕವನ್ನು ಘೋಷಿಸಲಾಗಿದೆ. ಕೋವಿಡ್ ನಿಯಮ ಪಾಲಿಸಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಬಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.