ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ (Students) ಬೇಸಿಗೆ ರಜೆ ಮುಗಿದಿದ್ದು, ನಾಳೆಯಿಂದ (ಜೂನ್ 1) 2026-27ನೇ ಶೈಕ್ಷಣಿಕ ಸಾಲಿನ ತರಗತಿಗಳು ಮರುಪ್ರಾರಂಭವಾಗುತ್ತಿವೆ.

ಈ ಶೈಕ್ಷಣಿಕ ವರ್ಷದ ಮೊದಲ ದಿನದಂದು ಶಾಲೆಗಳಲ್ಲಿ ತಳಿರು-ತೋರಣದಿಂದ ಸಿಂಗಾರ ಮಾಡಿ ವಿದ್ಯಾರ್ಥಿಗಳನ್ನು ಹಬ್ಬದ ಸಡಗರದ ವಾತಾವರಣದಲ್ಲಿ ಸ್ವಾಗತ ಮಾಡಬೇಕು. ಮಧ್ಯಾಹ್ನದ ಬಿಸಿಯೂಟಕ್ಕೆ ಸಿಹಿ ಮಾಡಲು ಶಿಕ್ಷಣ ಇಲಾಖೆ (Education Department), ಶಾಲೆಗಳಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ಡಿಕೆ ಶಿವಕುಮಾರ್‌ಗೆ ಅಧಿಕಾರ ಸಿಕ್ಕರೆ ನನಗೆ ಸಿಕ್ಕಹಾಗೇ – ಮಂಡ್ಯ ಜಿಲ್ಲೆಗೆ 2 ಸಚಿವ ಸ್ಥಾನದ ಬೇಡಿಕೆಯಿಟ್ಟ ಗಣಿಗ ರವಿಕುಮಾರ್

ಶಿವಮೊಗ್ಗದಲ್ಲಿ ನಿಗದಿಯಾಗಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಸದ್ಯದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ರದ್ದಾಗಿದೆ. ಶಾಲಾ ಹಂತದಲ್ಲಿ ಪ್ರಾರಂಭೊತ್ಸವ ಕಾರ್ಯಕ್ರಮ ಮಾಡಲು ಹಾಗೂ ನಾಳೆ ಎಲ್ಲಾ ಶಾಲೆಗಳಲ್ಲಿ ಪೋಷಕರ ಸಭೆ (PTM) ನಡೆಸಲು ಸೂಚಿಸಲಾಗಿದೆ. ಇದನ್ನೂ ಓದಿ: ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ
