ಶಾಲೆಯ ಛಾವಣಿ ಕುಸಿತ – ತಪ್ಪಿದ ಭಾರೀ ಅನಾಹುತ

Public TV
1 Min Read
raichur school 1

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕು ಜಾಲಹಳ್ಳಿ ಪಟ್ಟಣದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಣೆಯೊಂದರ ಛಾವಣಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ವಿದ್ಯಾರ್ಥಿಗಳು ಹಾಲು ಕುಡಿಯಲು ತರಗತಿಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಕೋಣೆಯ ಛಾವಣಿ ಕುಸಿದಿದೆ. ಸುಮಾರು 100 ವರ್ಷಗಳಷ್ಟು ಹಳೆಯದಾದ ಶಾಲಾ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ. ಶಾಲೆಯಲ್ಲಿ 24 ಕೋಣೆಗಳಿದ್ದು, ಕೇವಲ 8 ಕೋಣೆಗಳು ಮಾತ್ರವೇ ಬಳಕೆಗೆ ಯೋಗ್ಯವಾಗಿವೆ. ಉಳಿದ ಕೋಣೆಗಳು ಸಂಪೂರ್ಣ ಶಿಥಿಲಗೊಂಡಿದ್ದು, ವಿದ್ಯಾರ್ಥಿಗಳು ಬಯಲಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ. ಇದನ್ನೂ ಓದಿ: ಪಕ್ಕದಲ್ಲಿ ಬಾಂಬ್ ಬಿದ್ದರೂ ಊಟ, ವಸತಿ ನೀಡುತ್ತಿದೆ ಭಾರತೀಯ ರೆಸ್ಟೋರೆಂಟ್

raichur school

ಶಾಲೆಯಲ್ಲಿ 1ರಿಂದ 8ನೇ ತರಗತಿವರೆಗೆ 330 ವಿದ್ಯಾರ್ಥಿಗಳು ಓದುತ್ತಿದ್ದಾರೆ. ನಿಯೋಜಿತ 14 ಶಿಕ್ಷಕರ ಹುದ್ದೆಗಳಲ್ಲಿ 8 ಜನ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಶಿಕ್ಷಣ ಇಲಾಖೆ ಶಾಲೆಯನ್ನು ಸಂಪೂರ್ಣ ಕಡೆಗಣಿಸಿದೆ. ಮುಂದೆ ಅನಾಹುತವಾದರೆ ಯಾರು ಜವಾಬ್ದಾರಿ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸುಳ್ಳಿನ ಜಾತ್ರೆಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ & ಮಂಡೆ ಒಡೆದ ಹಣವಲ್ಲದೆ ಮತ್ತೇನು?: ಬಿಜೆಪಿ ಟೀಕೆ

raichur school 2

ಶಾಲೆಯ ಸಮಸ್ಯೆಗಳ ಬಗ್ಗೆ ಅನೇಕ ಬಾರಿ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಸ್ಥಳೀಯ ಶಾಸಕ ಕೆ ಶಿವನಗೌಡ ನಾಯಕ ಪ್ರತಿ ಸಭೆ ಸಮಾರಂಭಗಳಲ್ಲಿ ದೇವದುರ್ಗ ತಾಲೂಕು ಶಿಕ್ಷಣ ಕಾಶಿ ಮಾಡುವುದಾಗಿ ಹೇಳಿಕೊಳ್ಳುತ್ತಾರೆ. ಆದರೆ ಜಾಲಹಳ್ಳಿ ಪಟ್ಟಣದ ಶಾಲೆಗಳ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆ ಮುಖಂಡರು ಹಾಗೂ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *