Gadag | ಶಾಲಾ ಮೇಲ್ಛಾವಣಿ ಪದರ ಕುಸಿತ – ಓರ್ವ ಶಿಕ್ಷಕ, ಐವರು ವಿದ್ಯಾರ್ಥಿಗಳಿಗೆ ಗಾಯ

Public TV
1 Min Read
Gadag Classroom Roof Collapse

ಗದಗ: ಶಾಲೆಯ ಮೇಲ್ಛಾವಣಿ (Roof) ಪದರ ಕುಸಿದು ಐವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕರು ಗಾಯಗೊಂಡ ಘಟನೆ ಗದಗ (Gadag) ಜಿಲ್ಲೆ ಗಜೇಂದ್ರಗಡ ತಾಲೂಕಿನ ಚಿಲಝೆರಿ ಗ್ರಾಮದಲ್ಲಿ ನಡೆದಿದೆ.

Gadag Classroom Roof Collapse 1

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರಂತ ನಡೆದಿದೆ. 6ನೇ ತರಗತಿ ಕೊಠಡಿ ಮೇಲ್ಛಾವಣಿ ಕಾಂಕ್ರೀಟ್ ಪದರ ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಎಮ್.ಡಿ ಒಂಟಿ ಎಂಬ ಶಿಕ್ಷಕರ ತಲೆಗೆ ಗಂಭೀರ ಗಾಯಗಳಾಗಿವೆ. ಮಕ್ಕಳ ತಲೆ, ಕೈ, ಕಾಲು, ಮುಖಕ್ಕೆ ಗಾಯಗಳಾಗಿವೆ. ಗಾಯಾಳು ಮಕ್ಕಳು ಹಾಗೂ ಶಿಕ್ಷಕರನ್ನು ಕೂಡಲೇ ಗಜೇಂದ್ರಗಡ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ಕಮಿಷನ್ ಬಿಸಿ, ಹೈಕಮಾಂಡ್‌ಗೆ ತಲೆನೋವು – ಸಿಎಂ ಮಧ್ಯಪ್ರವೇಶ?

ಶಿಥಿಲಗೊಂಡ ಹಳೆಯ ಕೊಠಡಿಯಲ್ಲಿ ಮಕ್ಕಳು ಶಿಕ್ಷಣ ಪಡೆಯುವ ಅನಿವಾರ್ಯತೆ ಎದುರಾಗಿತ್ತು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು, ಜನ ಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಆದರೂ ಪ್ರಯೋಜನವಾಗಿಲ್ಲ ಎಂದು ಶಿಕ್ಷಣ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಘಟನೆ ಸಂಬಂಧ ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಲೂಟಿಕೋರರ ಸರ್ಕಾರ, ಮಾನ ಮರ್ಯಾದೆ ಇದ್ದರೆ ಸಿಎಂ, ಡಿಕೆಶಿ ರಾಜೀನಾಮೆ ಕೊಡಲಿ: ಛಲವಾದಿ ನಾರಾಯಣಸ್ವಾಮಿ

Share This Article