– ಮಲದ ಗುಂಡಿಗೆ ವಿದ್ಯಾರ್ಥಿಗಳನ್ನು ಇಳಿಸಿದ್ದಕ್ಕೆ ಪ್ರಿನ್ಸಿಪಾಲ್ ಅರೆಸ್ಟ್
ಕೋಲಾರ: ಮಾಲೂರಿನ ಯಲವಳ್ಳಿ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (School) ಸಿಬ್ಬಂದಿ, ಬಾಲಕಿಯರ ಕೊಠಡಿಯಲ್ಲಿ ಬಟ್ಟೆ ಬದಲಿಸುವ ಹಾಗೂ ಮಲಗಿದ್ದ ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
Advertisement
ಮೂವರು ವಿದ್ಯಾರ್ಥಿನಿಯರ ವೀಡಿಯೋ ಮಾಡಲಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರಿಗೆ ತಿಳಿದಾಗ ದಂಗಾಗಿದ್ದಾರೆ. ವಿಚಾರ ಬೆಳಕಿಗೆ ಬಂದೊಡನೆ ಪೋಷಕರು ಶಾಲೆಗೆ ಧಾವಿಸಿ ಪ್ರತಿಭಟನೆ ಮಾಡಿದ್ದಾರೆ. ಈ ಬಗ್ಗೆ `ಪಬ್ಲಿಕ್ ಟಿವಿ’ ಜೊತೆ ವಿದ್ಯಾರ್ಥಿಗಳ ಪೋಷಕರು ಹಾಗೂ ವಿದ್ಯಾರ್ಥಿಗಳು ಇಲ್ಲಿನ ಶಿಕ್ಷಕರು ಮತ್ತು ಸಿಬ್ಬಂದಿ, ಹೆಣ್ಣುಮಕ್ಕಳು ಬಟ್ಟೆ ಬದಲಿಸುವ ದೃಶ್ಯಗಳನ್ನು ಸೆರೆಹಿಡಿದು ಬೇರೆಯವರಿಗೆ ಕಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಆಟವಾಡುತ್ತಾ ನದಿಗೆ ಬಿದ್ದ ಮಗುವಿನ ರಕ್ಷಣೆಗಾಗಿ ಧುಮುಕಿದ ಐವರು ಸಾವು!
Advertisement
Advertisement
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಕ್ರೈಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ನವೀನ ಕುಮಾರ್ ರಾಜು, ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಮುನಿಯಪ್ಪ, ವಾರ್ಡನ್ ಮಂಜುನಾಥ್‍ನನ್ನು ಅಮಾನತ್ತು ಮಾಡಲಾಗಿದೆ. ವಿದ್ಯಾರ್ಥಿನಿಯ ಖಾಸಗಿ ವೀಡಿಯೋಗಳ ಬಗ್ಗೆ ಗಮನಕ್ಕೆ ಬಂದಿದೆ. ಕೂಡಲೇ ಇದರ ಹಿಂದೆ ಇರುವ ಜಾಲದ ಕುರಿತು ಪರಿಶೀಲನೆ ಮಾಡಲಾಗುವುದು. ಪೊಲೀಸ್ (Police) ಇಲಾಖೆ ಈಗಾಗಲೇ ಪ್ರಕರಣ ದಾಖಲು ಮಾಡಿಕೊಂಡಿದೆ. ಇಲ್ಲಿರುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾವಣೆ ಮಾಡಲಾಗುವುದು. ಮಕ್ಕಳು ಮತ್ತು ಪೋಷಕರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಪೋಷಕರು ನವೀನ್ ಕುಮಾರ್ ರಾಜು ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
Advertisement
ಅಲ್ಲದೇ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲ ಗುಂಡಿಗೆ ಇಳಿಸಿದ ವಿಚಾರವಾಗಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ದಾಖಲಿಸಿದ ದೂರಿನಡಿ 4 ಜನರ ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ. ಈ ಸಂಬಂಧ ಪ್ರಾಂಶುಪಾಲೆ ಭಾರತಮ್ಮ ಮತ್ತು ಸಹ ಶಿಕ್ಷಕ ಮುನಿಯಪ್ಪನನ್ನು ಮಾಸ್ತಿ ಪೊಲೀಸರು ಬಂಧಿಸಿದ್ದಾರೆ. ವಾರ್ಡನ್ ಮಂಜುನಾಥ್ ಹಾಗೂ ಅತಿಥಿ ಶಿಕ್ಷಕ ಅಭಿಷೇಕ್ ಪರಾರಿಯಾಗಿದ್ದು ಬಂಧನಕ್ಕೆ ಬಲೆ ಬೀಸಲಾಗಿದೆ.
ಆರೋಪಿಗಳ ವಿರುದ್ಧ ಮಲ ಹೊರುವ ಪದ್ದತಿ ನಿಷೇಧ ಕಾಯ್ದೆ, ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶಾಸಕ ಮಾನಪ್ಪ ವಜ್ಜಲ್‍ಗೆ ಪುತ್ರ ವಿಯೋಗ