– ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ
– ಒಂದೂವರೆ ವರ್ಷದ ಬಳಿಕ ಸ್ಕೂಲ್ ಸ್ಟಾರ್ಟ್
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭವಾಗಲಿದ್ದು, ಈ ಮೂಲಕ ಕೊರೊನಾ ಹಿನ್ನೆಲೆ ಬಂದ್ ಆಗಿದ್ದ ಶಾಲೆಗಳು ಬರೋಬ್ಬರಿ ಒಂದೂವರೆ ವರ್ಷಗಳ ಬಳಿಕ ಓಪನ್ ಆಗಲಿದೆ.
1-5 ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಶುರುವಾಗಲಿದ್ದು, ಇಂದಿನಿಂದ ಇನ್ನೊಂದು ವಾರ ಅರ್ಧ ದಿನ ಕ್ಲಾಸ್ ನಡೆಯಲಿದೆ. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಇಲ್ಲ ಎಂಬುದಾಗಿ ಇಲಾಖೆ ತಿಳಿಸಿದೆ.
Advertisement
Advertisement
1ರಿಂದ 5ನೇ ತರಗತಿಗೆ ಶಾಲೆ ಆರಂಭವಾಗಲಿದ್ದು, ನ.2ರವರೆಗೆ ಮಾತ್ರ ಅರ್ಧ ದಿನ ಮಾತ್ರ ತರಗತಿ ನಡೆಯಲಿದೆ. ನವೆಂಬರ್ 2ರಿಂದ ಪೂರ್ಣ ಪ್ರಮಾಣದಲ್ಲಿ ತರಗತಿ ಶುರುವಾಗಲಿದೆ. ಸೋಮವಾರದಿಂದ ಶುಕ್ರವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಕ್ಲಾಸ್ ನಡೆಯಲಿದೆ. ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಕ್ಲೀನಿಂಗ್ ಕಾರ್ಯ ನಡೆಯಲಿದೆ. ಪಾಸಿಟಿವಿಟಿ ದರ ಶೇ.1 ಕ್ಕಿಂತ ಕಡಿಮೆ ಇರುವಲ್ಲಿ ಮಾತ್ರ ಸ್ಕೂಲ್ ಓಪನ್ ಮಾಡಲಾಗುತ್ತಿದೆ. ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ. ಮಕ್ಕಳಲ್ಲಿ ಸೋಂಕು ಇಲ್ಲದೆ ಇರೋದನ್ನ ಪೋಷಕರು ದೃಢೀಕರಿಸಬೇಕು.
Advertisement
Advertisement
ಒಂದು ತರಗತಿಯಲ್ಲಿ 20 ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ನ.2ರಿಂದ ಶಾಲೆಯಲ್ಲೇ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಆನ್ ಲೈನ್ ಅಥವಾ ಆಫ್ ಲೈನ್ ಎರಡೂ ತರಗತಿಗೂ ಅವಕಾಶ. 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು. 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್ಶೀಲ್ಡ್ ಕಡ್ಡಾಯ ಹಾಗೂ ಶಿಕ್ಷಕರು, ಸಿಬ್ಬಂದಿ 2 ಡೋಸ್ ಲಸಿಕೆ ಕಡ್ಡಾಯವಾಗಿದೆ. ಮಕ್ಕಳಲ್ಲಿ ಒಂದು ಮೀಟರ್ ಅಂತರ ಪಾಲನೆ ಕಡ್ಡಾಯ. ಸ್ಯಾನಿಟೈಸೇಷನ್ ಹಾಗೂ ಶೌಚಾಲಯಗಳಲ್ಲಿ ಶುಚಿತ್ವ ಕಾಪಾಡುವುದು ಕಡ್ಡಾಯವಾಗಿದೆ. ಇದನ್ನೂ ಓದಿ: ಆನೇಕಲ್ನಲ್ಲಿ ಜೆಡಿಎಸ್ ಯುವಘಟಕದ ಅಧ್ಯಕ್ಷನ ಮೇಲೆ ಹಲ್ಲೆ
ಇನ್ನು ಶಾಲೆ ಆರಂಭದ ಬಗ್ಗೆ ಪೋಷಕರು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೊಂದು ವಾರ ಬಿಟ್ಟಿ ಕಳಿಸ್ತೀನಿ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು 2 ವರ್ಷದಿಂದ ಮನೆಯಲ್ಲೇ ಕೂತು ಕೂತು ಮಕ್ಕಳು ಮೊಬೈಲ್ ದಾಸರಾಗಿದ್ದಾರೆ. ಹೀಗಾಗಿ ಶಾಲೆಗೆ ಹೋಗುವುದೇ ಒಳ್ಳೆಯದು ಎಂದು ಹೇಳುತ್ತಿದ್ದಾರೆ.