– ಅಧಿಕಾರಿಗಳಿಂದ 11 ಮಕ್ಕಳ ರಕ್ಷಣೆ
ರಾಯಚೂರು: ಕೊರೊನಾ ಲಾಕ್‍ಡೌನ್ ಬಳಿಕ ಶಾಲೆ ಆರಂಭವಾದರೂ ಜಿಲ್ಲೆಯಲ್ಲಿ ಮಕ್ಕಳು ಕೂಲಿ ಕೆಲಸಕ್ಕೆ ಹೋಗುವುದು ನಿಂತಿಲ್ಲ. ಗೂಡ್ಸ್ ವಾಹನಗಳಲ್ಲಿ ನಿತ್ಯ ಮಕ್ಕಳನ್ನು ಕೂಲಿ ಕೆಲಸಕ್ಕೆ ಕರೆದೊಯ್ಯಲಾಗುತ್ತಿದೆ. ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿದ ಅಧಿಕಾರಿಗಳು, 11 ಮಕ್ಕಳನ್ನ ರಕ್ಷಿಸಿದ್ದಾರೆ.
Advertisement
ಬಾಲ ಕಾರ್ಮಿಕ ಯೋಜನಾ ಅಧಿಕಾರಿ ನೇತೃತ್ವದಲ್ಲಿ ಜಿಲ್ಲೆಯ ನೀರಮಾನ್ವಿ, ಸಿರವಾರ ಸೇರಿ ಹಲವೆಡೆ ಅಧಿಕಾರಿಗಳು ವಾಹನಗಳ ಮೇಲೆ ದಾಳಿ ಮಾಡಿದ್ದಾರೆ. ಬಾಲ ಕಾರ್ಮಿಕರನ್ನು ಕೂಲಿಗೆ ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ.0.65ಕ್ಕೆ ಇಳಿಕೆ- ರಾಜ್ಯದಲ್ಲಿಂದು 1,259 ಕೊರೊನಾ ಕೇಸ್, 29 ಸಾವು
Advertisement
Advertisement
ದಾಳಿಯಲ್ಲಿ 11 ಮಕ್ಕಳನ್ನು ರಕ್ಷಣೆ ಮಾಡಲಾಗಿದ್ದು, ಒಟ್ಟು 6 ವಾಹನಗಳ ಮೇಲೆ ಪ್ರಕರಣ ದಾಖಲಾಗಿದೆ. ವಾಹನಗಳ ಮೇಲೆ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರಕ್ಷಣೆ ಮಾಡಿದ ಮಕ್ಕಳನ್ನು ಶಿಕ್ಷಣ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.