ಕೊಪ್ಪಳ: ನರೇಗಾ ಯೋಜನೆಯಡಿ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆಗೆ ಕಂಪೌಂಡ್ ನಿರ್ಮಿಸಲಾಗಿದ್ದು, ಅರಣ್ಯ ಇಲಾಖೆಯ ಸಹಯೋಗದಲ್ಲಿ ಸುತ್ತಲೂ 150ಕ್ಕೂ ಹೆಚ್ಚು ವಿವಿಧ ಬಗೆಯ ಗಿಡಗಳನ್ನು ನೆಡಲಾಗಿದೆ.
ಖುದ್ದು ಶಾಲೆಯ ವಿದ್ಯಾರ್ಥಿಗಳಿಂದಲೇ ಗಿಡಗಳನ್ನು ನೆಡುವ ಮೂಲಕ ಅವರಿಗೆ ಗಿಡಗಳ ಜವಾಬ್ದಾರಿಯನ್ನು ವಹಿಸಲಾಗಿದೆ. ವಿದ್ಯಾರ್ಥಿಗಳು ಕೂಡ ಆಸಕ್ತಿಯಿಂದಲೇ ಒಂದು ಗಿಡವನ್ನು ಇಬ್ಬರು ನಿರ್ವಹಿಸುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಲ್ಲದೆ ತಮ್ಮ ಗಿಡಗಳಿಗೆ, ಸ್ವಾತಂತ್ರ್ಯ ಹೋರಾಟಗಾರರು, ರಾಷ್ಟ್ರ ನಾಯಕರು, ವಿಜ್ಞಾನಿಗಳು, ಕವಿಗಳ ಹೆಸರುಗಳನ್ನು ಇಟ್ಟುಕೊಂಡು ಪೋಷಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಕೊಡಗಿನ ಗ್ರಾಮೀಣ ಭಾಗದ ಮಕ್ಕಳಿಗೆ ವಿಚಿತ್ರ ಕಾಯಿಲೆ- ಪೋಷಕರಲ್ಲಿ ಅತಂಕ
ಇಂದು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕಾರ್ಯವನ್ನು ಶ್ಲಾಘಿಸಿದರು. ಜೊತೆಗೆ ಗಿಡಗಳ ಪೋಷಣೆಯನ್ನು ಮಾಡುವಂತೆ ತಿಳಿಸಿದರು.