ಬೆಳಗಾವಿ: ಪಾಕ್ ವಶದಲ್ಲಿರುವ ಪೈಲಟ್ ಅಭಿನಂದನ್ ಅವರಿಗಾಗಿ ಪುಟ್ಟ ಶಾಲಾ ಮಕ್ಕಳು ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ವಿಶೇಷವಾ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.
ಹುಕ್ಕೇರಿ ಪಟ್ಟಣದ ಮಹಾವೀರ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ವಿಶೇಷ ಪ್ರಾರ್ಥನೆ ನಡೆಸಲಾಯಿತು. ನಮ್ಮ ದೇಶದ ವೀರ ಯೋಧ ಪೈಲಟ್ ಅಭಿನಂದನ್ ಸುರಕ್ಷಿತವಾಗಿ ನಮ್ಮ ತಾಯ್ನಾಡಿಗೆ ವಾಪಸ್ ಬರಬೇಕು ಎಂದು ಮಕ್ಕಳು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಯೋಧ ಅಭಿನಂದನ್ ಹೆಸರಲ್ಲಿ ವಿಶೇಷ ಪ್ರಾರ್ಥನೆ ಮಾಡಿದ ನೂರಾರು ಮಕ್ಕಳು ವೀರ ಯೋಧ ಸುರಕ್ಷಿತವಾಗಿರಲಿ ಹಾಗೂ ಆದಷ್ಟು ಬೇಗ ನಮ್ಮ ದೇಶಕ್ಕೆ ಮರಳುವಂತಾಗಲಿ ಎಂದು ಪ್ರಾರ್ಥಿಸಿದರು. ಶಾಲಾ ಮಕ್ಕಳ ಜೊತೆಗೆ ಶಾಲೆಯ ಚೇರ್ಮನ್ ಮಹಾವೀರ ನಿಲಜಗಿ, ಆಡಳಿತ ಮಂಡಳಿ ಹಾಗೂ ಶಿಕ್ಷಕರು ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.
ಅಭಿನಂದನ್ ಪಾಕ್ ವಶವಾಗಿದ್ದು ಹೇಗೆ..?
ಪಾಕಿಸ್ತಾನ ಮಂಗಳವಾರ ಭಾರತದ ಗಡಿಯೊಳಗೆ ಯುದ್ಧ ವಿಮಾನಗಳನ್ನು ನುಗ್ಗಿಸಿ ದುಸ್ಸಾಹಸ ಮಾಡಿತ್ತು. ಭಾರತದ ಗಡಿ ದಾಟಿದ 3 ವಿಮಾನಗಳ ಪೈಕಿ, ಪಾಕಿಸ್ತಾನದ ಎಫ್-16 ಒಂದು ಯುದ್ಧ ವಿಮಾನವನ್ನು ಭಾರತ ಹೊಡೆದುರುಳಿಸಿದೆ. ಇನ್ನೆರಡು ವಿಮಾನಗಳನ್ನು ಮಿಗ್-21 ವಿಮಾನವನ್ನು ಅಟ್ಟಾಡಿಸಿಕೊಂಡು ಹೋಗಿದೆ. ಈ ವೇಳೆ ಪಾಕ್ ನೆಲದಲ್ಲಿ ಮಿಗ್ 22 ನೆಲಕ್ಕುರುಳಿದೆ. ಈ ವೇಳೆ ಅಭಿನಂದನೆ ಪ್ಯಾರಾಚೂಟ್‍ನಿಂದ ಜಿಗಿದು ನೆಲಕ್ಕೆ ಬಿದ್ದಿದ್ದಾರೆ. ತಮ್ಮ ನೆಲದಲ್ಲಿ ಅಭಿನಂದನ್ ಇರುವುದನ್ನು ಗಮನಿಸಿದ ಸ್ಥಳಿಯರು ಪಾಕಿಸ್ತಾನ ಸೇನೆಗೆ ಮಾಹಿತಿ ರವಾನಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪಾಕ್ ಸೈನಿಕರು ಅಭಿನಂದನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv