ಹಾಸನ: ಮದುವೆ (Marriage) ಒಪ್ಪಂದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕಿಯನ್ನು ಕಿಡ್ನಾಪ್ (Teacher Kidnap) ಮಾಡಿದ ಪ್ರಕರಣವೊಂದು ಹಾಸನದಲ್ಲಿ ಬೆಳಕಿಗೆ ಬಂದಿದೆ.
Advertisement
ಹಾಸನ (Hassan) ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಇಂದು ಬೆಳ್ಳಂಬೆಳಗ್ಗೆ ಸಿನಿಮೀಯ ರೀತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶಾಲೆಗೆ ತೆರಳಲು ಹೊರಟಿದ್ದ ಶಿಕ್ಷಕಿಯನ್ನು ಈಕೆಯ ಸಂಬಂಧಿ ರಾಮು ಅಪಹರಿಸಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: Breaking- ಹೆಂಡತಿ ಮತ್ತೆ ಬಂದರೆ ರಾಣಿ ಹಾಗೆ ನೋಡ್ಕೋತೀನಿ: ಮದುವೆ ಬಗ್ಗೆ ಬಾಯ್ಬಿಟ್ಟ ವರ್ತೂರ್
Advertisement
Advertisement
15 ದಿನಗಳ ಹಿಂದೆ ರಾಮು ಮತ್ತು ಪೋಷಕರು ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಮನೆಗೆ ಬಂದಿದ್ದರು. ಈ ವೇಳೆ ಮದುವೆ ಪ್ರಸ್ತಾಪಕ್ಕೆ ಯುವತಿ ಹಾಗೂ ಯುವತಿ ಕುಟುಂಬ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕಿ ಮದುವೆಗೆ ಒಪ್ಪಿಲ್ಲವೆಂದು ಆಕೆಯನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಶಿಕ್ಷಕಿಯ ಕುಟುಂಬಸ್ಥರು ಗಂಭೀರ ಆರೋಪಿಸಿದ್ದಾರೆ. ಇದನ್ನೂ ಓದಿ: ಮನೆಬಾಗಿಲಿಗೇ ಅಂಗನವಾಡಿ ಕಾರ್ಯಕರ್ತೆಯರು – ದುಡ್ಡು ಜಮೆಯಾಗದ `ಗೃಹಲಕ್ಷ್ಮಿ’ಯರ ದಾಖಲೆ ಸಂಗ್ರಹ
Advertisement
ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.