ಕೊಪ್ಪಳ: ಪುಲ್ವಾಮಾ ದಾಳಿ (Pulwama Attack) ಒಂದು ವ್ಯವಸ್ಥಿತ ಪಿತೂರಿ ಎಂದು ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ವಾಟ್ಸಪ್ ಸ್ಟೇಟಸ್ ಹಾಕಿದ್ದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ (Koppala) ಜಿಲ್ಲೆ ಕನಕಗಿರಿ ತಾಲೂಕಿನ ಗೋಡಿನಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ತಮ್ಮ ಸ್ಟೇಟಸ್‌ನಲ್ಲಿ ಪುಲ್ವಾಮಾ ದಾಳಿ ಕುರಿತು ಪೋಸ್ಟ್ ಹಾಕಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?
Advertisement
Advertisement
ಸ್ಟೇಟಸ್‌ನಲ್ಲಿ ಏನಿದೆ?
ಪುಲ್ವಾಮಾ ದಾಳಿ ಒಂದು ವ್ಯವಸ್ಥಿತ ಪಿತೂರಿ. ಇಲ್ಲಿ ಅಧಿಕಾರಕ್ಕಾಗಿ ಏನೆಲ್ಲ ನಡೆಯುತ್ತದೆ ಎನ್ನುವುದಕ್ಕೆ ಇದೊಂದು ಜ್ವಲಂತ ಉದಾಹರಣೆ. ಮಡಿದ ವೀರರಿಗೆ ಸ್ಮರಣೆಗಳು. ಇದೇ ವ್ಯವಸ್ಥೆ ಮುಂದುವರಿದರೆ ಭಾರತದ ಭವಿಷ್ಯವೂ ಬ್ಲ್ಯಾಕ್ ಡೇ ಆಗಿ ಪರಿಣಮಿಸಬಹುದು. ಈಗ ನಾವು ಎಚ್ಚೆತ್ತುಕೊಳ್ಳಬೇಕು. ದೇಶ ಮೊದಲು ಎಂದು ಸ್ಟೇಟಸ್‌ನಲ್ಲಿ ಬರೆದುಕೊಂಡಿದ್ದರು.
Advertisement
Advertisement
2019ರ ಫೆಬ್ರವರಿ 14ರಂದು ಭಾರತೀಯ ಸೇನೆ (Indian Army) ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್ (CRPF) ಯೋಧರು ಹುತಾತ್ಮರಾಗಿದ್ದರು. ಜೈಶ್-ಎ-ಮೊಹಮ್ಮದ್ (JEM) ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು. ಇದನ್ನೂ ಓದಿ: ಪುಲ್ವಾಮಾ ದಾಳಿಯನ್ನು ಸಂಭ್ರಮಿಸಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k