ಮಡಿಕೇರಿ: ಶಾಲಾ ವಾಹನ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಟ್ಟಳ್ಳಿ ಸಮೀಪ ಕತ್ತಲೆಕಾಡು ತಿರುವಿನಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕೂಲಿ ಕೆಲಸಕ್ಕೆಂದು ಸಿದ್ದಾಪುರಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಮತ್ತು ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಚೆಟ್ಟಳ್ಳಿ ಕಾಫಿ ಸಂಶೋಧನಾ ಕೇಂದ್ರದ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಮಕ್ಕಂದೂರು ನಿವಾಸಿ ಕೂಲಿ ಕಾರ್ಮಿಕ ಲಿತೀಶ್ ಪೂಜಾರಿ (22) ಮತ್ತು ಮೂರನೇ ಮೈಲ್ ನಿವಾಸಿ ಬಿ.ಎನ್.ಕೋಟಿ (60) ತೀವ್ರ ಗಾಯಗೊಂಡಿದ್ದರು. ಇದನ್ನೂ ಓದಿ: 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಉಚಿತ: ಕೇಂದ್ರ
ಇಬ್ಬರನ್ನು ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಅಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಲತೀಶ್ ಪೂಜಾರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಬಿ.ಎನ್ ಕೋಟಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಾಕಿದ ನಾಯಿಯಿಂದಲ್ಲೆ ಮೃತಪಟ್ಟ 82 ವರ್ಷದ ವೃದ್ಧೆ