ಲಕ್ನೋ: ಅಪ್ತಾಪ್ತ ವಿದ್ಯಾರ್ಥಿಯೊಬ್ಬ ರೊಮ್ಯಾನ್ಸ್ ಮಾಡಲು ಒಪ್ಪಲಿಲ್ಲ ಎಂದು ತನ್ನ ಕ್ಲಾಸ್ಮೆಟ್ ವಿದ್ಯಾರ್ಥಿನಿಯ ಮೇಲೆ ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
ಮಥುರಾ ರಸ್ತೆಮಾರ್ಗದ ಕಾಲೋನಿ ಸಮೀಪದಲ್ಲಿ 15 ವರ್ಷದ ವಿದ್ಯಾರ್ಥಿನಿ ಒಬ್ಬಳೆ ಶಾಲೆಗೆ ಹೋಗುತ್ತಿದ್ದಳು. ಈ ಸಂದರ್ಭದಲ್ಲಿ ಅದೇ ಶಾಲೆಯ 16 ವರ್ಷದ ವಿದ್ಯಾರ್ಥಿಯೊಬ್ಬ ಆಕೆಯನ್ನು ರೊಮ್ಯಾನ್ಸ್ ಗೆ ಕರೆದಿದ್ದಾನೆ. ಇದಕ್ಕೆ ವಿದ್ಯಾರ್ಥಿನಿ ನಿರಾಕರಿಸಿದ್ದಾಳೆ.
Advertisement
Advertisement
ರೊಮ್ಯಾನ್ಸ್ ಒಪ್ಪಲಿಲ್ಲ ಎಂದು ಕೋಪಗೊಂಡ ವಿದ್ಯಾರ್ಥಿ ಶಾಲೆಗೆ ಹೋಗುತ್ತಿದ್ದ ವೇಳೆ ಬೈಕ್ನಲ್ಲಿ ಬಂದು ಆಕೆಯ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಸದ್ಯಕ್ಕೆ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಆಕೆಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಈ ಘಟನೆ ಕುರಿತು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಬಾಲ ಆರೋಪಿ ಪತ್ತೆಗೆ ಜಾಲ ಬೀಸಿದ್ದಾರೆ.
Advertisement
ಇದನ್ನು ಓದಿ: ಶಾಲೆಯಲ್ಲಿ ವಿದ್ಯಾರ್ಥಿನಿಯನ್ನು ಕೆಲ ಸೆಕೆಂಡ್ ತಬ್ಬಿಕೊಂಡಿದ್ದಕ್ಕೆ ವಿದ್ಯಾರ್ಥಿ ಸಸ್ಪೆಂಡ್!