ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರವಷ್ಟೇ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಆರ್ಭಟಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.
ನೇತ್ರಾವತಿ, ಕುಮಾರಧಾರ, ಫಲ್ಗುಣಿ ತುಂಬಿ ಹರಿಯುತ್ತಿದೆ. ಹೀಗಾಗಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೈಸೂರು ಭಾಗದಲ್ಲಿ ಮಳೆಯ ಪ್ರಮಾಣ ತಗ್ಗಿದರೂ, ನದಿಗಳ ನೀರಿನ ಮಟ್ಟ ಇಳಿಕೆಯಾಗಿಲ್ಲ. ನಂಜನಗೂರು ಸಮೀಪದ ಕಪಿಲಾ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮೈಸೂರು-ಊಟಿ ಹೈವೇ ಜಲಾವೃತಗೊಂಡಿದ್ದು, ಸಂಪರ್ಕ ಕಡಿತವಾಗಿದೆ.
ರಾಷ್ಟ್ರೀಯ ಹೆದ್ದಾರಿ 766ರಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ನಂಜನಗೂಡು ದೇವಾಲಯದ ಸ್ನಾನಘಟ್ಟ, 16 ಕಾಲು ಮಂಟಪ ಮುಳುಗಡೆಯಾಗಿದ್ದು, ಭಕ್ತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸುತ್ತೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸುತ್ತೂರು ಸೇತುವೆ ಸಂಪೂರ್ಣ ಮುಳುಗಡೆ ಆಗಿದೆ. ನೂರಾರು ಎಕರೆ ಜಮೀನಿಗೆ ನೀರು ನುಗ್ಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews