– ಮುಂಜಾಗ್ರತಾ ಕ್ರಮ ಜಾರಿ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ (Covid) ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಶಾಲಾ – ಕಾಲೇಜುಗಳು ಆರಂಭ ಆಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿಸಿದೆ. ಶಾಲಾ-ಕಾಲೇಜುಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಪ್ರಾಥಮಿಕ ಮುಂಜಾಗ್ರತಾ ಕ್ರಮ ಜಾರಿ ಆಗುವ ಸಾಧ್ಯತೆ ಇದೆ.
ಈಗಾಗಲೇ ಕೆಲವೊಂದು ಖಾಸಗಿ ಶಾಲಾ-ಕಾಲೇಜ್‌ಗಳಲ್ಲಿ ಮುಂಜಾಗ್ರತಾ ಕ್ರಮ ರಿಲೀಸ್ ಆಗಿದ್ದು, ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮುಂಜಾಗ್ರತಾ ಕ್ರಮ ಜಾರಿಯಾಗುವ ಸಾಧ್ಯತೆ ಇದೆ. ಮೇ 29ರಿಂದ ಬಹುತೇಕ ಶಾಲೆಗಳು ಶುರುವಾಗುತ್ತಿದ್ದು, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ (Health Department) ಜೊತೆ ಮಾತನಾಡಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಉತ್ತರಾಖಂಡ | ಭಾರೀ ಮಳೆಗೆ ಭೂಕುಸಿತ – ಹೆದ್ದಾರಿಯಲ್ಲಿ 6ಕಿ.ಮೀ ಟ್ರಾಫಿಕ್
ಮಾರ್ಗಸೂಚಿ ಏನಿರಬಹುದು?
* ಶಾಲಾ ಆವರಣದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು.
* ಪ್ರಾರ್ಥನೆ, ಊಟದ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
* ಆರೋಗ್ಯದಲ್ಲಿ ವ್ಯತ್ಯಾಸ ಇರೋ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳು ಶಾಲೆಗೆ ಬಾರದಂತೆ ಸೂಚನೆ ನೀಡುವುದು.
* ಆರೋಗ್ಯ ತೊಂದರೆ ಇರೋ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸುವುದು.
* ಶಾಲಾ-ಕಾಲೇಜುಗಳಲ್ಲಿ ಸ್ಯಾನಿಟೈಸರ್ ಬಳಕೆ ಮಾಡುವುದು.
* ಶಾಲಾ ಶೌಚಾಲಯ, ಕುಡಿಯುವ ನೀರಿನಲ್ಲಿ ಶುಚಿತ್ವ ಕಾಪಾಡಲು ಆದ್ಯತೆ ಕೊಡುವುದು.
ಇನ್ನು ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು, ಶಾಲೆ ಆರಂಭವಾಗಲು ಇನ್ನೂ ಸಮಯ ಇದೆ. ಈಗಲೇ ನಿರ್ಧಾರ ಮಾಡಲ್ಲ. ಒಂದು ವಾರ ನೋಡಿಕೊಂಡು ಶಾಲೆ ವಿಚಾರದಲ್ಲಿ ಏನು ಮಾಡಬೇಕು ನೋಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ನೈತಿಕ ಮೌಲ್ಯಗಳ ಕೊರತೆ – ಆರ್‌ಜೆಡಿಯಿಂದ ಪುತ್ರ ತೇಜ್ ಪ್ರತಾಪ್‌ರನ್ನ ಹೊರದಬ್ಬಿದ ಲಾಲು ಪ್ರಸಾದ್ ಯಾದವ್