ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏನೂ ಮಾಡಿದರೂ, ವಿಜ್ಞಾನ ಸುಳ್ಳು ಹೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತದಲ್ಲಿ ಕೋವಿಡ್‍ನಿಂದಾಗಿ 47 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ವರದಿ ಮಾಡಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಕೋವಿಡ್ ಸಾಂಕ್ರಾಮಿಕ ರೋಗದಿಂದ 47 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ. ಆದರೆ ಸರ್ಕಾರ ಹೇಳಿಕೊಂಡಂತೆ 4.8 ಲಕ್ಷ ಮಂದಿ ಸಾವನ್ನಪ್ಪಿಲ್ಲ. ಮೋದಿ ಅವರು ಏನು ಮಾಡಿದರು, ವಿಜ್ಞಾನ ಸುಳ್ಳು ಹೇಳುವುದಿಲ್ಲ ಎಂದು ಟಾಂಗ್ ನೀಡಿದ್ದಾರೆ.
Advertisement
Advertisement
ಕೋವಿಡ್‍ನಿಂದಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳನ್ನು ಗೌರವಿಸಿ, ಕಡ್ಡಾಯವಾಗಿ 4 ಲಕ್ಷ ರೂ. ಪರಿಹಾರ ನೀಡಿ ಅವರನ್ನು ಬೆಂಬಲಿಸಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಆರ್ಭಟ – GRPA ಆ್ಯಕ್ಷನ್ ಪ್ಲಾನ್‌ನಂತೆ ರೆಡ್‌ಅಲರ್ಟ್ ಘೋಷಣೆ
Advertisement
ಕೋವಿಡ್‍ನಿಂದಾಗಿ ಮೃತಪಟ್ಟವರ ಅಂಕಿ-ಅಂಶದ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಪ್ರತಿಪಕ್ಷಗಳ ನಾಯಕರ ನಡುವೆ ತಿಕ್ಕಾಟ ನಡೆಯುತ್ತಿತ್ತು. ವಿಶ್ವ ಆರೋಗ್ಯ ಸಂಸ್ಥೆಯ ಈ ವರದಿಯು ಕೇಂದ್ರ ಸರ್ಕಾರದ ಅಂಕಿ-ಅಂಶಕ್ಕಿಂತಲೂ 10 ಪಟ್ಟು ಹೆಚ್ಚು ಮರಣ ಪ್ರಕರಣಗಳು ದಾಖಲಿಸಲಾಗಿದೆ.
Advertisement
47 lakh Indians died due to the Covid pandemic. NOT 4.8 lakh as claimed by the Govt.
Science doesn’t LIE. Modi does.
Respect families who’ve lost loved ones. Support them with the mandated ₹4 lakh compensation. pic.twitter.com/p9y1VdVFsA
— Rahul Gandhi (@RahulGandhi) May 6, 2022
ಜನವರಿ 2020ರಿಂದ ಡಿಸೆಂಬರ್ 2021ರ ವರೆಗೂ ಭಾರತದಾದ್ಯಂತ ಕೋವಿಡ್ ಕಾರಣಗಳಿಂದ ಸಾವಿಗೀಡಾದವರ ಸಂಖ್ಯೆ 47,40,894 ಮುಟ್ಟಿತ್ತು. ಆರೋಗ್ಯ ಇಲಾಖೆಯ ದಾಖಲೆಯ ಪ್ರಕಾರ 2021ರ ಅಂತ್ಯಕ್ಕೆ ಸುಮಾರು 4,81,000 ಪ್ರಕರಣ ದಾಖಲಾಗಿತ್ತು. ಪ್ರಸ್ತುತ ದೇಶದಲ್ಲಿ ಕೋವಿಡ್‍ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,23,000 ದಾಟಿದೆ. ಇದನ್ನೂ ಓದಿ: ಭಾರತದಲ್ಲಿ ಕೋವಿಡ್‌ನಿಂದ 47 ಲಕ್ಷ ಮಂದಿ ಸಾವು – WHO ವರದಿ
The total number of deaths associated with #COVID19 worldwide from 2020-2021 may be closer to 14.9 million: New estimates by WHO & @UNDESA.
That’s 9.5 million more deaths than reported https://t.co/qDvaA6t5KZ #HealthData pic.twitter.com/ZjABJzlgiZ
— World Health Organization (WHO) (@WHO) May 5, 2022
ಜಗತ್ತಿನಾದ್ಯಂತ ಎರಡು ವರ್ಷಗಳಲ್ಲಿ ಕೋವಿಡ್ ಮತ್ತು ಅದಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಸುಮಾರು 1.5 ಕೋಟಿ ಮಂದಿ ಮೃತಪಟ್ಟಿದ್ದಾರೆ ಎಂದು WHO ವರದಿ ಹೇಳಿದೆ. ಸುಮಾರು 60 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿತ್ತು ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.