– ಪಬ್ಲಿಕ್ ಟಿವಿಯ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ವಿದ್ಯಾರ್ಥಿಗಳು, ಪೋಷಕರ ದಂಡು
ಬೆಂಗಳೂರು: ಉತ್ತಮ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಮಾರ್ಗವಾಗಿ ವಿದ್ಯಾಮಂದಿರ (Vidhyamandira) ಶೈಕ್ಷಣಿಕ ಎಕ್ಸ್‌ಪೋ (Education Expo )ಆಯೋಜಿಸಲಾಗಿದೆ. ವಿದೇಶಗಳಿಗೆ ಶಿಕ್ಷಣಕ್ಕಾಗಿ ತೆರಳುವ ಯೋಚನೆಯಲ್ಲಿರುವ ನಮ್ಮ ವಿದ್ಯಾರ್ಥಿಗಳಿಗೆ ನಮ್ಮಲ್ಲಿಯೇ ಅಂತಹ ಶಿಕ್ಷಣ ಸಿಗಬೇಕು ಎಂದು `ಪಬ್ಲಿಕ್ ಟಿವಿ’ ಮುಖ್ಯಸ್ಥರಾದ ಹೆಚ್.ಆರ್ ರಂಗನಾಥ್ ಅವರು ಆಶಯ ವ್ಯಕ್ತಪಡಿಸಿದರು.
ಮಲ್ಲೇಶ್ವರಂನಲ್ಲಿ Ad6 ಸಹಯೋಗದಲ್ಲಿ ಆಯೋಜಿಸಿರುವ ವಿದ್ಯಾಮಂದಿರ ಶೈಕ್ಷಣಿಕ ಎಕ್ಸ್‌ಪೋ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಇಲ್ಲಿ ಡಿಗ್ರಿ ಮಾಡಿ ಉನ್ನತ ಶಿಕ್ಷಣವನ್ನು ವಿದೇಶದಲ್ಲಿ ಮಾಡಬೇಕು ಎಂಬ ಆಲೋಚನೆ ಯುವಜನತೆಗೆ ಬಂದಿದೆ. ಕೆನಡಾ ಶಿಕ್ಷಣ ಸಂಸ್ಥೆಗಳು ನಡೆಯುತ್ತಿರುವುದು ಭಾರತೀಯ ಹಣದಿಂದ. ಕಳೆದ ಸಲ 2.5 ಲಕ್ಷ ಮಕ್ಕಳು ಶಿಕ್ಷಣಕ್ಕಾಗಿ ಅಲ್ಲಿಗೆ ಹೋಗಿದ್ದಾರೆ. ನಮ್ಮ ಬಲವೇ ಅಲ್ಲಿಗೆ ಹರಿದು ಹೋದಂತೆ ಕಾಣುತ್ತದೆ. ನಮ್ಮ ಶಿಕ್ಷಣ ಕ್ಷೇತ್ರದಲ್ಲಿ ವಿಜ್ಞಾನ ಇನ್ನೂ ಬಲಗೊಳಿಸಬೇಕು. ಆಗ ನಾವು ಇಲ್ಲಿಯೇ ನಮ್ಮ ಬಲವನ್ನು ಉಳಿಸಿಕೊಳ್ಳಬಹುದು. ಆದರೆ ಅಲ್ಲಿಗೇ ಹೋಗಬೇಕು, ಅಲ್ಲಿಯೇ ಇರಬೇಕು ಎನ್ನುವವರಿಗೆ ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ವಿದ್ಯುಕ್ತ ಚಾಲನೆ – 35 ಕ್ಕೂ ಅಧಿಕ ಸಂಸ್ಥೆಗಳು ಭಾಗಿ
ನಮ್ಮ ಮಕ್ಕಳಿಗೆ ಸರಿಯಾದ ಮಾಹಿತಿ ಸಿಗಲಿ. ಈ ಮೇಳ ಮಕ್ಕಳಿಗೆ ಉಪಯೋಗವಾಗಲಿ ಎಂದು ಅವರು ಈ ವೇಳೆ ಶುಭ ಹಾರೈಸಿದರು.
ಕೇಂಬ್ರಿಡ್ಜ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಿ.ಕೆ ಮೋಹನ್ ಅವರು ಮಾತನಾಡಿ, ಬೆಳಕು ಕಾರ್ಯಕ್ರಮದ ಮೂಲಕ ಅನೇಕರ ಬಾಳಿಗೆ ಬೆಳಕು ಕೊಟ್ಟಿರುವ `ಪಬ್ಲಿಕ್ ಟಿವಿ’ ಶಿಕ್ಷಣದ ಮಾಹಿತಿ ಮೂಲಕವೂ ಬೆಳಕು ಹರಡುತ್ತಿದೆ ಎಂದಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರ ಭಾರತದಲ್ಲಿ ಮತ್ತು ಬೆಂಗಳೂರಿನಲ್ಲಿ ಯಾವುದೇ ವಿದೇಶದ ಯುನಿವರ್ಸಿಟಿಗಿಂತ ಹಿಂದೆ ಉಳಿದಿಲ್ಲ. ಈಗ ಈ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರೆದಿದ್ದೇವೆ ಎಂದರು.
ಆರ್‍ಆರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕಿರಣ್ ಅವರು ಮಾತನಾಡಿ, ನಮ್ಮ ಶಿಕ್ಷಣದ ಬಗ್ಗೆ, ಶಿಕ್ಷಣ ಸಂಸ್ಥೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲು ಉತ್ತಮವಾದ ವೇದಿಕೆ ಇದಾಗಿದೆ. ಬೆಂಗಳೂರು ಶಿಕ್ಷಣಕ್ಕೆ ಉತ್ತಮ ಕೇಂದ್ರವಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.
ಮಲ್ಲೇಶ್ವರಂನ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ಆಯೋಜಿಸಿರುವ ಪಬ್ಲಿಕ್ ಟಿವಿ ವಿದ್ಯಾಮಂದಿರ ಶಿಕ್ಷಣ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಆಗಮಿಸುತ್ತಿದ್ದಾರೆ. ಎಲ್ಲರಿಗೂ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. ಮೇಳವು ಬೆಳಗ್ಗೆ 9:30 ರಿಂದ ಸಂಜೆ 6 ಗಂಟೆ ವರೆಗೆ ಇರಲಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಮಂದಿರಕ್ಕೆ ಇಂದು ಚಾಲನೆ – ಡಿಗ್ರಿ ನಂತರದ ಕೋರ್ಸ್‌ಗಳ ಬಗ್ಗೆ ತಿಳಿದುಕೊಳ್ಳಲು ತಪ್ಪದೇ ಬನ್ನಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]